ಬೆಂಗಳೂರು: ರಾಜ್ಯದಲ್ಲಿ ಮುಂದಿನ ಮೂರ್ನಾಲ್ಕು ದಿನ ಬಿರು ಗಾಳಿ ಸಹಿತ ಭಾರೀ ಮಳೆಯಾಗಲಿದೆ (rain) ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಉತ್ತರ ಕನ್ನಡ, ಶಿವಮೊಗ್ಗ ಹಾಗೂ ಚಿಕ್ಕಮಗಳೂರು ಜಿಲ್ಲೆಗಳಲ್ಲಿ ಆರೆಂಜ್ ಅಲರ್ಟ ನೀಡಲಾಗಿದ್ದು, ಉಳಿದ ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ. ಕರಾವಳಿಯ ಉತ್ತರ ಕನ್ನಡ, ದಕ್ಷಿಣ ಕನ್ನಡ ಉಡುಪಿಯಲ್ಲಿ ಭಾರಿ ಮಳೆಯಾಗಲಿದ್ದು, ಉತ್ತರ ಒಳನಾಡಿನ ಬೆಳಗಾವಿ ಹಾಗೂ ದಕ್ಷಿಣ ಒಳನಾಡಿನ ಚಿಕ್ಕಮಗಳೂರು, ಶಿವಮೊಗ್ಗ, ಹಾಸನ, ಕೊಡಗು ಮತ್ತು ಮೈಸೂರು ಜಿಲ್ಲೆಯಲ್ಲಿ ಭಾರಿ ಮಳೆಯಾಗುವ ಸಾಧ್ಯತೆಯಿದೆ.
ಇನ್ನೂ ಉತ್ತರ ಹಾಗೂ ದಕ್ಷಿಣ ಒಳನಾಡಿನ ಉಳಿದ ಜಿಲ್ಲೆಗಳಲ್ಲಿ ಸಾಧಾರಣ ಮಳೆಯಾಗುವ ಸಂಭವವಿದೆ ಎಂದು ಇಲಾಖೆ ಮುನ್ಸೂಚನೆ ನೀಡಿದೆ. ಕರಾವಳಿಯಲ್ಲಿ ಗಂಟೆಗೆ 45ರಿಂದ 60 ಕಿ.ಮೀ ವೇಗದಲ್ಲಿ ಗಾಳಿ ಬೀಸುವ ಸಾಧ್ಯತೆಯಿದೆ. ಆದ್ದರಿಂದ ಮೀನುಗಾರರು ಸಮುದ್ರಕ್ಕೆ ಇಳಿಯದಂತೆ ಸೂಚಿಸಲಾಗಿದೆ.



