ದಾವಣಗೆರೆ: ಪ್ರಸಕ್ತ ಶೈಕ್ಷಣಿಕ ಸಾಲಿನಲ್ಲಿ ಮಾಜಿ ಸೈನಿಕರು, ಮಾಜಿ ಸೈನಿಕ ಅವಲಂಬಿತ ಮಕ್ಕಳ ವೈದ್ಯಕೀಯ ಮತ್ತು ದಂತ ವೈದ್ಯಕೀಯ ವ್ಯಾಸಂಗಕ್ಕಾಗಿ ಕೇಂದ್ರ ಸರ್ಕಾರದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ಸೀಟು ಹಂಚಿಕೆ ಮೇರೆಗೆ ಕೇಂದ್ರಿಯ ಸೈನಿಕ ಮಂಡಳಿಯಿಂದ ಡಿಫೆನ್ಸ್ ಕೋಟಾದಡಿ ಅರ್ಜಿ ಆಹ್ವಾನಿಸಲಾಗಿದೆ.
ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ನೀಟ್) ಯಲ್ಲಿ ಅರ್ಹತೆ ಪಡೆದಿರುವ ವಿದ್ಯಾರ್ಥಿಗಳು ಕೆ.ಎಸ್.ಬಿ ಜಾಲತಾಣದ ಬದಲಾಗಿ ಗೂಗಲ್ ಫಾರಂ ಮೂಲಕ ಆಗಸ್ಟ್ 15ರೊಳಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಕಲ್ಯಾಣ ಇಲಾಖೆಯಿಂದ ಪಡೆದ ದೃಢೀಕೃತ ಅರ್ಹತಾ ಪ್ರಮಾಣ ಪತ್ರದೊಂದಿಗೆ ಜಾಲತಾಣ DESW Website – www.desw.gov.in and DGR Website – www.dgrindia.gov.in ನಲ್ಲಿ ಅರ್ಜಿ ಸಲ್ಲಿಸಬಹುದಾಗಿದೆ.
ಹೆಚ್ಚಿನ ಮಾಹಿತಿಗಾಗಿ ಸೈನಿಕ ಕಲ್ಯಾಣ ಮತ್ತು ಪುನರ್ವಸತಿ ಇಲಾಖೆ ದೂರವಾಣಿ ಸಂಖ್ಯೆ 080182-220925 ಗೆ ಸಂಪರ್ಕಿಸಬಹುದು ಎಂದು ಇಲಾಖೆಯ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



