ದಾವಣಗೆರೆ: ಬೆಂಗಳೂರು ಗ್ರಾಮಾಂತರ ಜಿಲ್ಲೆ ಹೊಸಕೋಟೆ ತಾಲ್ಲೂಕು ಸೊಣ್ಣಹಳ್ಳಿಪುರದಲ್ಲಿರುವ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆಯಲ್ಲಿ ಸೆಪ್ಟೆಂಬರ್ ನಿಂದ 13 ದಿನಗಳ ಕಾಲ ನಿರುದ್ಯೋಗಿ ಪುರುಷರಿಗೆ ಉಚಿತ ಸಿಸಿಟಿವಿ ಅಳವಡಿಕೆ ಮತ್ತು ಸರ್ವೀಸಿಂಗ್ ತರಬೇತಿ ಶಿಬಿರವನ್ನು ಏರ್ಪಡಿಸಿದೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ಸೆ.8 ರಂದು ಬೆಳಗ್ಗೆ 9 ಗಂಟೆಗೆ ಕೆನರಾ ಬ್ಯಾಂಕ್ ಗ್ರಾಮೀಣ ಸ್ವ ಉದ್ಯೋಗ ತರಬೇತಿ ಸಂಸ್ಥೆ, ಸೊಣ್ಣಹಳ್ಳಿಪುರ, ಹಸಿಗಾಳ(ಅಂಚೆ), ಹೊಸಕೋಟೆ ತಾಲ್ಲೂಕು, ಬೆಂಗಳೂರು ಗ್ರಾಮಾಂತರ ಜಿಲ್ಲೆ ಇಲ್ಲಿ ನಡೆಯುವ ತರಬೇತಿಗೆ ನೇರವಾಗಿ ವಿದ್ಯಾರ್ಹತೆ ಮತ್ತು ವಿಳಾಸ ದಾಖಲಾತಿಗಳೊಂದಿಗೆ ಹಾಜರಾಗಬೇಕು. ಹೆಚ್ಚಿನ ಮಾಹಿತಿಗಾಗಿ ಸಂಸ್ಥೆಯನ್ನು ದೂ.ಸಂಖ್ಯೆ 8970476050, 9591514154, 9686248369, 8970446644, 9505894247 ಗಳಿಗೆ ಸಂಪರ್ಕಿಸಬಹುದೆಂದು ಸಂಸ್ಥೆಯ ನಿರ್ದೇಶಕರು ತಿಳಿಸಿದ್ದಾರೆ.



