ದಾವಣಗೆರೆ: ಆಯುಧ ಪೂಜೆ ಮತ್ತು ವಿಜಯದಶಮಿ ಹಬ್ಬದ ಪ್ರಯುಕ್ತ ಮೆರವಣಿಗೆ ಸಂದರ್ಭದಲ್ಲಿ ಯಾವುದೇ ಅಹಿತಕರ ಘಟನೆ ಸಂಭವಿಸದಂತೆ ಹಾಗೂ ಕಾನೂನು ಮತ್ತು ಸುವ್ಯವಸ್ಥೆ ಕಾಪಾಡುವ ಸಲುವಾಗಿ ಅಕ್ಟೋಬರ್ 2 ರಂದು ಬೆಳಿಗ್ಗೆ 6 ರಿಂದ ರಾತ್ರಿ 8 ಗಂಟೆಯವರೆಗೆ ಮುಂಜಾಗ್ರತಾ ಕ್ರಮವಾಗಿ ಮದ್ಯ ಮಾರಾಟ ಮತ್ತು ಸರಬರಾಜು ನಿಷೇಧಿಸಿ ಜಿಲ್ಲಾ ದಂಡಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಆದೇಶಿಸಿದ್ದಾರೆ.
ಕಲಾ ಪ್ರತಿಭೋತ್ಸವ
ಕನ್ನಡ ಮತ್ತು ಸಂಸ್ಕೃತಿ ಇಲಾಖೆವತಿಯಿಂದ ಮಕ್ಕಳು ಮತ್ತು ಯುವ ಜನರ ಕಲಾಪ್ರತಿಭೆಯನ್ನು ಗುರುತಿಸಿ ಅವರಿಗೆ ಉತ್ತೇಜನ ನೀಡುವ ಮತ್ತು ಅವರು ತಮ್ಮ ಕಲಾ ನೈಪುಣ್ಯ ವೃದ್ದಿಗೊಳಿಸುವಂತೆ ಪ್ರೋತ್ಸಾಹಿಸಲು ಕಲಾ ಪ್ರತಿಭೋತ್ಸವ ಸ್ಪರ್ಧೆ ನಡೆಸಲು ಅರ್ಜಿ ಆಹ್ವಾನಿಸಲಾಗಿದೆ.
ಬಾಲ ಪ್ರತಿಭೆ (8 ರಿಂದ 14 ವರ್ಷವಯೋಮಾನ), ಕಿಶೋರ ಪ್ರತಿಭೆ (14 ರಿಂದ 18 ವರ್ಷವಯೋಮಾನ), ಶಾಸ್ರೀಯ ನೃತ್ಯ, ಸುಗಮ ಸಂಗೀತ, ಚಿತ್ರಕಲೆ, ಜಾನಪದ ಗೀತೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತದಲ್ಲಿ ಭಾಗವಹಿಸಬಹುದು.
ಯುವ ಪ್ರತಿಭೆ (18 ರಿಂದ 30 ವರ್ಷ ವಯೋಮಾನ) ನನ್ನ ನೆಚ್ಚಿನ ಸಾಹಿತಿ, ಶಾಸ್ತ್ರೀಯ ನೃತ್ಯ, ಸುಗಮ ಸಂಗೀತ, ಹಿಂದೂಸ್ತಾನಿ, ಕರ್ನಾಟಕ ಶಾಸ್ತ್ರೀಯ ಸಂಗೀತ, ಚಿತ್ರಕಲೆ, ಹಿಂದೂಸ್ತಾನಿ/ಕರ್ನಾಟಕ ವಾದ್ಯ ಸಂಗೀತ, ನಾಟಕ- 10 ರಿಂದ 18 ತಂಡದ ಸದಸ್ಯರು ಭಾಗವಹಿಸಬಹುದು.
ಸ್ಪರ್ಧಿಗಳು ಸ್ವ ವಿವರದ ಅರ್ಜಿ ಸಲ್ಲಿಸಲು ಅಕ್ಟೋಬರ್ 10 ಕೊನೆಯ ದಿನವಾಗಿರುತ್ತದೆ. ಸ್ಪರ್ಧೆಯಲ್ಲಿ ಭಾಗವಹಿಸುವ ಅಭ್ಯರ್ಥಿಗಳು ತಮ್ಮ ವಿವರವನ್ನು ಸಹಾಯಕ ನಿರ್ದೇಶಕರ ಕಚೇರಿ, ಕನ್ನಡ ಮತ್ತು ಸಂಸ್ಕøತಿ ಇಲಾಖೆ, ಜಿಲ್ಲಾಡಳಿತ ಭವನ ದಾವಣಗೆರೆ. ಹೆಚ್ಚಿನ ಮಾಹಿತಿಗಾಗಿ ದೂ.ಸಂ:08192-234849ನ್ನು ಸಂಪರ್ಕಿಸಲು ಇಲಾಖೆಯ ಸಹಾಯಕ ನಿರ್ದೇಶಕರಾದ ರವಿಚಂದ್ರ ತಿಳಿಸಿದ್ದಾರೆ.



