ದಾವಣಗೆರೆ: ಮನೆಗೆ ನೀರಿನ ಮೋಟರ್ ಆನ್ ಮಾಡುವಾಗ ವಿದ್ಯುತ್ ಶಾಕ್ ಹೊಡೆದು ಮಹಿಳೆ ಮೃ*ತಪಟ್ಟ ಘಟನೆ ಜಿಲ್ಲೆಯ ಜಗಳೂರು ತಾಲೂಕಿನ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಗ್ರಾಮದ ರತ್ನಮ್ಮ (48) ಮೃತ ಮಹಿಳೆ. ಮನೆಗೆ ನೀರು ತುಂಬಿಸಲು ಬೀದಿ ನಲ್ಲಿಗೆ ಮೋಟರ್ ಆನ್ ಮಾಡುವಾಗ ವಿದ್ಯುತ್ ಸ್ಪರ್ಶಿಸಿದೆ. ವಿದ್ಯುತ್ ಶಾಕ್ ನಿಂದ ಕೆಳಗೆ ಬಿದ್ದು ಒದ್ದಾಡಿದ್ದಾರೆ. ಆಗ ಪುತ್ರಿ ಅಶ್ವಿನಿ ಹಾಗೂ ಪತಿ ಮಂಜಪ್ಪ ಜಗಳೂರಿನ ಆಸ್ಪತ್ರೆಗೆ ಕೆರೆದುಕೊಂಡು ಹೋಗುವಾಗ ಮಾರ್ಗ ಮಧ್ಯೆ ಮೃತಪಟ್ಟಿದ್ದಾರೆ. ಈ ಬಗ್ಗೆ ಜಗಳೂರು ಪೊಲೀಸ್ ಠಾಣೆಯಲ್ಲಿ
ಪ್ರಕರಣ ದಾಖಲಾಗಿದೆ.