ಬೆಂಗಳೂರು: ರಾಜ್ಯದಲ್ಲಿ ಮಳೆಯ ಅಬ್ಬರ ಹೆಚ್ಚಾಗಿದ್ದು, ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ ಹಲವು ಜಿಲ್ಲೆಗಳಲ್ಲಿ ಪ್ರವಾಹ ರೀತಿಯಲ್ಲಿ ಮಳೆಯಾಗುತ್ತಿದೆ. ಇನ್ನೂ ಎರಡ್ಮೂರು ದಿನ ಮಳೆ ಮುಂದುವರೆಯಲಿದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಅಕ್ಟೋಬರ್ 14ರ ಬಳಿಕ ಮಳೆ ಅಬ್ಬರ ಕೊಂಚ ಕಡಿಮೆಯಾಗಲಿದೆ. ಅಕ್ಟೋಬರ್ 13ರವರೆಗೆ ರಾಜ್ಯದಲ್ಲಿ ಭಾರಿ ಮಳೆಯಾಗಲಿದ್ದು, 14 ಜಿಲ್ಲೆಗಳಲ್ಲಿ ಯೆಲ್ಲೋ ಅಲರ್ಟ್ ಘೋಷಿಸಲಾಗಿದೆ.
ಎಲ್ಲೆಲ್ಲಿ ಮಳೆ..?
ಶಿವಮೊಗ್ಗ, ಚಿಕ್ಕಮಗಳೂರು, ಕೊಡಗು, ಹಾಸನ, ದಕ್ಷಿಣ ಕನ್ನಡ, ತುಮಕೂರು, ಮೈಸೂರು, ಮಂಡ್ಯ, ರಾಮನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ನಗರ,. ಚಿಕ್ಕಬಳ್ಳಾಪುರ, , ಚಾಮರಾಜನಗರ, ಕೋಲಾರ ಜಿಲ್ಲೆಗಳಲ್ಲಿ ಭಾರೀ ಮಳೆಯಾಗಲಿದೆ. ಇನ್ನೂ ಉಡುಪಿ, ಉತ್ತರ ಕನ್ನಡ, ಚಿಕ್ಕಮಗಳೂರು, ಕೊಡಗು ಜಿಲ್ಲೆಗಳಲ್ಲಿಯೂ ಮಳೆಯಾಗಲಿದೆ. ಚಿತ್ರದುರ್ಗ, ಬೀದರ್, ಕಲಬುರಗಿ, ಯಾದಗಿರಿ, ರಾಯಚೂರು ಭಾಗಗಳಲ್ಲಿ ಸಾಧಾರಣ ಮಳೆಯಾಗುವ ಮುನ್ಸೂಚನೆ ಇದೆ.