ದಾವಣಗೆರೆ: ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿ (Voter list) ಸಿದ್ದಪಡಿಸುವ ಕೆಲಸ ಆರಂಭವಾಗಿದ್ದು, 2025 ರ ನವೆಂಬರ್ 1 ಕ್ಕೆ ಮೂರು ವರ್ಷ ಮುಂಚಿತವಾಗಿ ಯಾವುದೇ ಅಂಗೀಕೃತ ವಿಶ್ವವಿದ್ಯಾಲಯದಿಂದ ಪಡೆದ ಪದವಿ ಅಥವಾ ತತ್ಸಮಾನ ವಿದ್ಯಾರ್ಹತೆ ಹೊಂದಿರುವ ಹಾಗೂ ಎಲ್ಲಾ ಸರ್ಕಾರಿ ಅಧಿಕಾರಿಗಳು, ಹೊರಗುತ್ತಿಗೆ ನೌಕರರು ಮತದಾರರ ಪಟ್ಟಿಗೆ ಕಡ್ಡಾಯವಾಗಿ ಹೆಸರು ನೋಂದಣಿ ಮಾಡಿಕೊಳ್ಳುವಂತೆ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ಸೂಚಿಸಿದ್ದಾರೆ.
ಮತದಾರ ಪಟ್ಟಿಗೆ ಸೇರಲು ಅರ್ಹತೆ ಏನು..?
ಆಗ್ನೇಯ ಪದವೀಧರರ ಕ್ಷೇತ್ರದ ವ್ಯಾಪ್ತಿಗೆ ದಾವಣಗೆರೆ, ಹರಿಹರ ಹಾಗೂ ಜಗಳೂರು ತಾಲ್ಲೂಕುಗಳು ಒಳಪಡುತ್ತವೆ. ಈ ಕ್ಷೇತ್ರಗಳ ವ್ಯಾಪ್ತಿಗೆ ಒಳಪಡುವ ಮತರದಾರರು ಈ ತಾಲ್ಲೂಕು ವ್ಯಾಪ್ತಿಯಲ್ಲಿ ಕನಿಷ್ಠ 6 ತಿಂಗಳಿಗಿಂತಲೂ ಹೆಚ್ಚಿನ ಅವಧಿಯಲ್ಲಿ ಖಾಯಂ ನಿವಾಸಿಯಾಗಿರಬೇಕು.
ಯಾವ ದಾಖಲೆ ಅಗತ್ಯ
ಆಗ್ನೇಯ ಪದವೀಧರರ ಕ್ಷೇತ್ರದ ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ನೋಂದಣಿಗೆ ಅಂಗೀಕೃತ ವಿವಿಯಿಂದ ಪದವಿ ಪ್ರಮಾಣ ಪತ್ರ ಮತ್ತು ಅಗತ್ಯ ದಾಖಲೆಗಳೊಂದಿಗೆ ನಮೂನೆ-18 ಪ್ರತಿ, ಮತದಾರ ಗುರುತಿನ ಚೀಟಿ, ಆಧಾರ್ ಕಾರ್ಡ್, ಮತ್ತು ಆಯೋಗ ನಿಗದಿಪಡಿಸಿದ ದಾಖಲೆಗಳೊಂದಿಗೆ ಮತದಾರರ ನೊಂದಣಾಧಿಕಾರಿಗಳಿಗೆ ಸಲ್ಲಿಸಬಹುದು.
ನೋಂದಣಿಗೆ ಎಲ್ಲೆಲ್ಲಿ ಅವಕಾಶ..?
ದಾವಣಗೆರೆ ನಗರದ ಉತ್ತರ ಮತ್ತು ದಕ್ಷಿಣ ಹಾಗೂ ಕಸಬಾ ಹೋಬಳಿ ವ್ಯಾಪ್ತಿಯಲ್ಲಿನ ಅರ್ಹ ಪದವೀಧರರು ಮಹಾನಗರ ಪಾಲಿಕೆ, ದಾವಣಗೆರೆ, ಹರಿಹರ ಮತ್ತು ಜಗಳೂರು ತಾಲ್ಲೂಕು ವ್ಯಾಪ್ತಿಯಲ್ಲಿನ ಅರ್ಹ ಪದವೀಧರರ ನೋಂದಣಿಗೆ ತಾಲ್ಲೂಕು ಕಚೇರಿಯಲ್ಲಿ ಅವಕಾಶ ಕಲ್ಪಿಸಲಾಗಿದೆ.
ಆನ್ ಲೈನ್ ನಲ್ಲಿಯೂ ಅವಕಾಶ
ನಮೂನೆ 18 ಕನ್ನಡ, ಇಂಗ್ಲೀಷ್ ಡೌನ್‍ಲೋಡ್‍ಗಾಗಿhttps://ceo.karnataka.gov.in/uploads/mediatoupload1693469269.pdf ಅಥವಾ https://ceo.karnataka.gov.in/uploads/mediatoupload1693469289.pdf ನ ಜಾಲತಾಣದಲ್ಲಿ ಡೌನ್‍ಲೋಡ್ ಮಾಡೊಕೊಳ್ಳಬಹದು.
ಸಹಾಯಕ ನೋಂದಣಾಧಿಕಾರಿಗಳನ್ನು ವಿವರ: ದಾವಣಗೆರೆ ನಗರ ಉತ್ತರ ವ್ಯಾಪ್ತಿಗೆ ಮಹಾನಗರ ಪಾಲಿಕೆ ಕಂದಾಯ ಅಧಿಕಾರಿ ಎಂ.ಬಿ.ಗುರುಪ್ರಸಾದ್, ಮೊ.ಸಂಖ್ಯೆ 9611400040, ದಾವಣಗೆರೆ ದಕ್ಷಿಣ ವ್ಯಾಪ್ತಿಗೆ ಮಹಾನಗರ ಪಾಲಿಕೆ ಸಹಾಯಕ ಕಾರ್ಯಪಾಲಕ ಅಭಿಯಂತರ ಎಂ.ಆರ್.ಸಚಿನ್, ಮೊ.ನಂ 78289137361, ದಾವಣಗೆರೆ ಕೆ.ಆರ್.ದೇವರಾಜ್ ಮೊ.8197128162, ಹರಿಹರ ವಿ.ಪ್ರಶಾಂತ್ ಮೊ.97433661524, ಜಗಳೂರು ಜಿ.ಕೆ.ಮಂಜುನಾಥ್ ಮೊ.8296418321 ಗೆ ಸಂಪರ್ಕಿಸಬಹುದು ಎಂದು ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ ತಿಳಿಸಿದ್ದಾರೆ.