ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ಆರ್ಥಿಕವಾಗಿ ಹಿಂದುಳಿದಿರುವ ಅಲ್ಪಸಂಖ್ಯಾತ ಸಮುದಾಯದವರ ಸರಳ ವಿವಾಹಕ್ಕೆ (marriage) ಪ್ರೋತ್ಸಾಹ ನೀಡಲು ಸ್ವಯಂ ಸೇವಾ ಸಂಸ್ಥೆಗಳ ಮೂಲಕ ನಡೆಯುವ ಸಮೂಹ ವಿವಾಹ ವೆಚ್ಚಗಳಿಗಾಗಿ ಆನ್‍ಲೈನ್ ಮೂಲಕ ಅರ್ಜಿ ಆಹ್ವಾನಿಸಲಾಗಿದೆ.
ಅರ್ಜಿಯನ್ನು ವೆಬ್‍ಸೈಟ್ https://gokdom.kar.nic.in ಮೂಲಕ ಅರ್ಜಿ ಸಲ್ಲಿಸಬೇಕು. ಪ್ರೋತ್ಸಾಹಧನ ಪಡೆಯಲು ಮದುವೆ ದಿನಾಂಕದ 3 ತಿಂಗಳ ಒಳಗಾಗಿ ಜಿಲ್ಲೆಯ ಜಿಲ್ಲಾ ಅಧಿಕಾರಿಗಳು, ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ, ಇವರ ಕಛೇರಿಗೆ ನಿಗಧಿತ ನಮೂನೆಯಲ್ಲಿ ಮದುವೆ ಪ್ರಮಾಣ ಪತ್ರ ಮತ್ತು ಇತರೆ ಅಗತ್ಯ ದಾಖಲಾತಿಗಳನ್ನು ಸಲ್ಲಿಸಬೇಕೆಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.