ದಾವಣಗೆರೆ: ‘ಜಿಲ್ಲೆಯಲ್ಲಿ ಅನ್ನಭಾಗ್ಯ (annabhagya) ಯೋಜನೆಯ ಪಡಿತರ ಅಕ್ರಮ ಸಾಗಟ ಹಾಗೂ ತೂಕದಲ್ಲಿ ವಂಚನೆ ಮಾಡಿದ 12 ನ್ಯಾಯಬೆಲೆ ಅಂಗಡಿ ವಿರುದ್ಧ ಪ್ರಕರಣ ದಾಖಲಾಗಿದೆ’ ಎಂದು ಆಹಾರ ಮತ್ತು ನಾಗರಿಕ ಸರಬರಾಜು ಇಲಾಖೆಯ ಅಧಿಕಾರಿಗಳು ಮಾಹಿತಿ ನೀಡಿದರು.
12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು
ಪಂಚಾಯಿತಿ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಗ್ಯಾರಂಟಿ ಅನುಷ್ಠಾನದ ಪ್ರಗತಿ ಪರಿಶೀಲನೆ ಸಭೆಯಲ್ಲಿ ಅಧಿಕಾರಿಗಳು ಈ ಮಾಹಿತಿ ನೀಡಿದ್ದಾರೆ. ಫಲಾನುಭವಿಗಳ ಬಳಿ ಹಣ ವಸೂಲಿ ಸೇರಿದಂತೆ ಹಲವು ಲೋಪದೋಷಗಳನ್ನು ಗಮನಿಸಿ 12 ನ್ಯಾಯಬೆಲೆ ಅಂಗಡಿಗಳನ್ನು ಅಮಾನತು ಮಾಡಲಾಗಿದೆ ಎಂದರು.
ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು
»ಗಿತ್ತೆ ಮಾಧವ ವಿಠಲ, ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ
450 ಕ್ವಿಂ. ಅಕ್ಕಿ, 150 ಕ್ವಿಂ. ರಾಗಿ ವಶ
ಅಕ್ರಮವಾಗಿ ದಾಸ್ತಾನು ಮಾಡಿದ್ದ 450 ಕ್ವಿಂಟಾಲ್ ಅನ್ನಭಾಗ್ಯ ಅಕ್ಕಿ 150 ಕ್ವಿಂಟಾಲ್ ರಾಗಿ ವಶಪಡಿಸಿಕೊಳ್ಳಲಾಗಿದೆ. 2023ರಿಂದ ಈವರೆಗೆ ಜಿಲ್ಲೆಯಲ್ಲಿ 3312 ಫಲಾನುಭವಿಗಳು ಮರಣ ಹೊಂದಿದ್ದಾರೆ. ಇದರಲ್ಲಿ 215 ಗೃಹಲಕ್ಷ್ಮಿ ಫಲಾನುಭವಿಗಳ ಖಾತೆಯಿಂದ 25.60 ಲಕ್ಷವನ್ನು ಸರ್ಕಾರಕ್ಕೆ ಮರುಪಾವತಿಸಲಾಗಿದೆ ಎಂದು ತಿಳಿಸಿದರು.
ಇನ್ಮುಂದೆ ಬೆಳಿಗ್ಗೆ 6 ರಿಂದ ಪಡಿತರ ವಿತರಣೆ
ಕೂಲಿ ಕಾರ್ಮಿಕರಿಗೆ ಅನುಕೂಲವಾಗುವಂತೆ ಬೆಳಿಗ್ಗೆ 6 ರಿಂದ ಸಂಜೆ 8ರವರೆಗೆ ಅನ್ನಭಾಗ್ಯ ಯೋಜನೆಯ ಪಡಿತರ ವಿತರಣೆ ಮಾಡಬೇಕು’ ಎಂದು ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಗಿತ್ತೆ ಮಾಧವ ವಿಠಲ ರಾವ್ ಸೂಚನೆ ನೀಡಿದರು.
‘ಯುವನಿಧಿ ಯೋಜನೆ ಬಗ್ಗೆ ಶಾಲಾ- ಕಾಲೇಜುಗಳಲ್ಲಿ ವಿಶ್ವವಿದ್ಯಾಲಯ ಹಾಗೂ ವಿದ್ಯಾರ್ಥಿನಿಲಯಗಳಲ್ಲಿ ಅಭಿಯಾನ ಹಮ್ಮಿಕೊಂಡು ಅರಿವು ಮೂಡಿಬೇಕು ಎಂದು ತಿಳಿಸಿದರು.