ದಾವಣಗೆರೆ: ರಾಜ್ಯದಲ್ಲಿಯೇ ಮೊದಲ ಬಾರಿಗೆ ದಾವಣಗೆರೆಯಲ್ಲಿ ಬಾಪೂಜಿ ಶಿಕ್ಷಣ ಸಂಸ್ಥೆಯಿಂದ ಖಾಸಗಿ ಕೃಷಿ ಮತ್ತು ತೋಟಗಾರಿಕಾ ಕಾಲೇಜು ಆರಂಭಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ.
ಸುದ್ದಿಗೋಷ್ಠಿಯಲ್ಲಿ ಈ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವ ಎಸ್.ಎಸ್. ಮಲ್ಲಿಕಾರ್ಜುನ್ ಮಾಹಿತಿ ನೀಡಿದರು.ಬಾಪೂಜಿ ವಿದ್ಯಾ ಸಂಸ್ಥೆಗೆ ಕೃಷಿ ಮತ್ತು ತೋಟಗಾರಿಕಾ ಕಾಲೇಜು ಆರಂಭಿಸಲು ಸರ್ಕಾರ ಅಕ್ಟೋಬರ್ 31ರಂದು ಅನುಮತಿ ನೀಡಿದೆ ಎಂದರು.
ಇದುವರೆಗೆ ಸರ್ಕಾರದಿಂದ ಖಾಸಗಿ ಸಂಸ್ಥೆಗಳಿಗೆ ಕೃಷಿ ಕಾಲೇಜು ಮಾಡಲು ಅವಕಾಶವಿರಲಿಲ್ಲ. ಸರ್ಕಾರ ಪ್ರಥಮ ಬಾರಿಗೆ ಈ ಅವಕಾಶ ನೀಡಿದೆ.
-ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಸಚಿವ ಬಕ್ಕಪ್ಪ
ಎಸ್.ಎಸ್. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರೀಸಚ್ರ್ ಸೆಂಟರ್ ನಲ್ಲಿ ಶುರು
ಖಾಸಗಿ ಕೃಷಿ ಕಾಲೇಜು ಶಿವಮೊಗ್ಗದ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿಶ್ವವಿದ್ಯಾನಿಲಯದ ಸಂಯೋಜನೆಯಡಿಯಲ್ಲಿ ಎಸ್.ಎಸ್. ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ ಅಂಡ್ ರೀಸಚ್ರ್ ಸೆಂಟರ್ ಆವರಣದಲ್ಲಿ ಎಸ್.ಎಸ್. ಇನ್ಸ್ಟಿಟ್ಯೂಟ್ ಆಫ್ ಅಗ್ರಿಕಲ್ಚರ್ ಅಂಡ್ ಹಾರ್ಟಿಕಲ್ಚರ್ ಸೈನ್ಸಸ್ ಮಹಾವಿದ್ಯಾಲಯ ಶುರುವಾಗಲಿದೆ ಎಂದು ತಿಳಿಸಿದರು.
ಸರ್ಕಾರ ಪ್ರಥಮ ಬಾರಿಗೆ ಅವಕಾಶ
ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕಾ ವಿವಿ ಕುಲಸಚಿವ ಬಕ್ಕಪ್ಪ ಮಾತನಾಡಿ, ಇದುವರೆಗೆ ಸರ್ಕಾರದಿಂದ ಖಾಸಗಿ ಸಂಸ್ಥೆಗಳಿಗೆ ಕೃಷಿ ಕಾಲೇಜು ಮಾಡಲು ಅವಕಾಶವಿರಲಿಲ್ಲ. ಸರ್ಕಾರ ಪ್ರಥಮ ಬಾರಿಗೆ ಈ ಅವಕಾಶ ನೀಡಿದೆ ಎಂದರು.
2025-26ನೇ ಸಾಲಿನಿಂದಲೇ ಪ್ರವೇಶ ಶುರು
ಈ ಕಾಲೇಜಿನಿಂದ ಜಿಲ್ಲೆಯ ರೈತರಿಗೆ ಹೆಚ್ಚು ಅನುಕೂಲವಾಗಲಿದೆ. ಶೇ.60ರಷ್ಟು ಸೀಟು ಸಿಇಟಿ ಮೂಲಕ ಆಯ್ಕೆ ಮತ್ತು 40ರಷ್ಟು ಆಡಳಿತ ಮಂಡಳಿ ಕೋಟಾದಲ್ಲಿ ನೀಡಲಾಗುತ್ತದೆ ಎಂದರು.
2025-26ನೇ ಸಾಲಿನಿಂದಲೇ ಪ್ರವೇಶ ಪ್ರಕ್ರಿಯೆ ಆರಂಭವಾಗಲಿದೆ. ರೈತರ ಮಕ್ಕಳಿಗೆ ಆದ್ಯತೆ ನೀಡಲಾಗುತ್ತದೆ ಎಂದು ತಿಳಿಸಿದರು. ಈ ಸಂದರ್ಭದಲ್ಲಿ ಸಂಸದೆ ಪ್ರಭಾಮಲ್ಲಿಕಾರ್ಜನ್ ಇದ್ದರು.



