ದಾವಣಗೆರೆ: ನಿರ್ಮಾಣ ಹಂತದ ಕಟ್ಟಡದ ತೊಟ್ಟಿಗೆ ಬಿದ್ದು 6 ವರ್ಷದ ಬಾಲಕ ಸಾವನ್ನಪ್ಪಿರುವ ಘಟನೆ ದಾವಣಗೆರೆಯಲ್ಲಿ ನಡೆದಿದೆ.
ಚನ್ನಗಿರಿ ತಾಲೂಕಿನ ಸಂತೆಬೆನ್ನೂರು ಗ್ರಾಮದಲ್ಲಿ ಈ ಘಟನೆ ನಡೆದಿದೆ. ಅವಾಜ್ ಖಾನ್ ಮೃತ ಬಾಲಕನಾಗಿದ್ದಾನೆ. ಮೂತ್ರ ವಿಸರ್ಜನೆಗೆಂದು ತೆರಳಿದ್ದ ವೇಳೆ ನಿರ್ಮಾಣ ಹಂತದ ಕಟ್ಟಡದ ತೊಟ್ಟಿಗೆ ಆಯತಪ್ಪಿ ಬಿದ್ದ ಬಾಲಕ ನೀರಿನಲ್ಲಿ ಮುಳುಗಿ ಸಾವನ್ನಪ್ಪಿದ್ದಾನೆ.
ತೊಟ್ಟಿಯಲ್ಲಿ ಚಪ್ಪಲಿ ತೇಲುತ್ತಿತ್ತು. ಇದನ್ನು ಗಮನಿಸಿದಾಗ ತೊಟ್ಟಿ ಪರಿಶೀಲಿಸಿದಾಗ ಬಾಲಕ ನೀರಿನಲ್ಲಿ ಮುಳುಗಿರುವುದು ಪತ್ತೆಯಾಗಿದೆ. ಸಂತೆಬೆನ್ನೂರು ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ.



