ದಾವಣಗೆರೆ: ನರೇಗಾ ಕೂಲಿಕಾರರಿಗೆ ಉಚಿತ ಆರೋಗ್ಯ ತಪಾಸಣೆ ಶಿಬಿರ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ಜಿಲ್ಲೆಯಾದ್ಯಂತ ನರೇಗಾ (Mahatma Gandhi National Rural Employment Guarantee) ಕಾರ್ಮಿಕರ ಆರೋಗ್ಯದ ಸುರಕ್ಷತೆ ಮತ್ತು ಕಲ್ಯಾಣಕ್ಕಾಗಿ, ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಗಳ ಸಂಯುಕ್ತಾಶ್ರಯದಲ್ಲಿ ಮಹಾತ್ಮ ಗಾಂಧಿ ನರೇಗಾ ಯೋಜನೆ ಅಡಿಯಲ್ಲಿ ಕೆಲಸ ನಿರ್ವಹಿಸುತ್ತಿರುವ ಕೂಲಿಕಾರರಿಗಾಗಿ ವಿವಿಧ ತಾಲ್ಲೂಕುಗಳಲ್ಲಿನ ಕಾಮಗಾರಿಯ ಸ್ಥಳಗಳಲ್ಲಿಯೇ ಉಚಿತ ಆರೋಗ್ಯ ತಪಾಸಣೆ (Free health checkup)  ಶಿಬಿರಗಳನ್ನು ನವಂಬರ್ 15 ರಂದು ಆಯೋಜಿಸಲಾಗಿದೆ.

ಶಿಬಿರ ನಡೆಯುವ ಸ್ಥಳಗಳು: ಚನ್ನಗಿರಿ ತಾಲ್ಲೂಕು – ದಾಗಿನಕಟ್ಟೆ ಗ್ರಾಮ ಪಂಚಾಯಿತಿ, ದಾವಣಗೆರೆ ತಾಲ್ಲೂಕು – ಕಾಡಜ್ಜಿ ಗ್ರಾಮ ಪಂಚಾಯಿತಿ, ಹರಿಹರ ತಾಲ್ಲೂಕು – ಕಡರನಾಯಕನಹಳ್ಳಿ ಗ್ರಾಮ ಪಂಚಾಯಿತಿ, ಹೊನ್ನಾಳಿ ತಾಲ್ಲೂಕು – ತಿಮ್ಲಾಪುರ ಗ್ರಾಮ ಪಂಚಾಯಿತಿ, ಜಗಳೂರು ತಾಲ್ಲೂಕು – ತೋರಣಗಟ್ಟೆ ಗ್ರಾಮ ಪಂಚಾಯಿತಿ, ನ್ಯಾಮತಿ ತಾಲ್ಲೂಕು – ಕುಂಕೋವಾ ಗ್ರಾಮ ಪಂಚಾಯಿತಿ.

ತಪಾಸಣೆಯ ಅಂಶಗಳು:-ರಕ್ತದ ಒತ್ತಡ, ರಕ್ತದಲ್ಲಿನ ಸಕ್ಕರೆ, ಕ್ಷಯರೋಗ, ಪರೀಕ್ಷೆ, ಕುಷ್ಟರೋಗ ಪರೀಕ್ಷೆ, ಜ್ವರದ ಪ್ರಕರಣಗಳಲ್ಲಿ ರಕ್ತದ ಮಾದರಿ ಸಂಗ್ರಹ ಹಾಗೂ ಅಗತ್ಯವಿದ್ದರೆ ಇತರೆ ತಪಾಸಣೆಗಳನ್ನೂ ನಡೆಸಲಾಗುತ್ತದೆ. ಈ ಶಿಬಿರಗಳ ಮೂಲಕ ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯನ್ನು ಬಲಪಡಿಸುವ ಜೊತೆಗೆ, ಸಮಯೋಚಿತ ವೈದ್ಯಕೀಯ ನೆರವು ಮತ್ತು ಅರಿವು ಮೂಡಿಸುವ ಉದ್ದೇಶ ಹೊಂದಲಾಗಿದೆ.

ಮಾನ್ಯ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್ ಅವರು ಮಹಾತ್ಮ ಗಾಂಧಿ ನರೇಗಾ ಯೋಜನೆಯಡಿ ಗ್ರಾಮೀಣ ಪ್ರದೇಶಗಳಲ್ಲಿ ದುಡಿದು ಜೀವನ ಸಾಗಿಸುತ್ತಿರುವ ಕೂಲಿಕಾರರ ಆರೋಗ್ಯ ನಮ್ಮ ಪ್ರಮುಖ ಆದ್ಯತೆ. ಶ್ರಮದ ಮೂಲಕ ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡುತ್ತಿರುವ ಈ ಶ್ರಮಜೀವಿಗಳ ದೈಹಿಕ ಕ್ಷೇಮತೆ ಖಚಿತಪಡಿಸಿಕೊಳ್ಳುವುದು ನಮ್ಮ ಎಲ್ಲರ ಜವಾಬ್ದಾರಿಯಾಗಿರುತ್ತದೆ. ಈ ಉಚಿತ ಆರೋಗ್ಯ ತಪಾಸಣೆ ಶಿಬಿರಗಳು, ನರೇಗಾ ಕಾರ್ಮಿಕರ ಆರೋಗ್ಯದ ಮೇಲಿನ ಕಾಳಜಿಯ ಪ್ರತೀಕವಾಗಿದೆ.

ಈ ಶಿಬಿರಗಳ ಮೂಲಕ ಪ್ರತಿ ಕೆಲಸಗಾರರು ತಮ್ಮ ಆರೋಗ್ಯದ ಬಗ್ಗೆ ಅರಿವು ಪಡೆಯಬೇಕು, ಸಮಯಕ್ಕೆ ಸರಿಯಾಗಿ ತಪಾಸಣೆ ಮಾಡಿಸಿಕೊಳ್ಳಬೇಕು ಮತ್ತು ಅಗತ್ಯ ಚಿಕಿತ್ಸೆಯನ್ನು ಪಡೆಯಬೇಕು. ಎಲ್ಲ ಇಲಾಖಾ ಅಧಿಕಾರಿಗಳು, ವೈದ್ಯಕೀಯ ಸಿಬ್ಬಂದಿ ಹಾಗೂ ಪಂಚಾಯತ್ ನೌಕರರು ಈ ಕಾರ್ಯದಲ್ಲಿ ಸಕ್ರಿಯವಾಗಿ ಭಾಗವಹಿಸಿ ಶಿಬಿರಗಳನ್ನು ಯಶಸ್ವಿಯಾಗಿ ನಡೆಸಬೇಕೆಂದು ಎಂದು ತಿಳಿಸಿದ್ದಾರೆ.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *