ದಾವಣಗೆರೆ: ಸರ್ಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಉದ್ಯೋಗ ಮೇಳ | 141 ವಿದ್ಯಾರ್ಥಿಗಳು ಆಯ್ಕೆ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
2 Min Read

ದಾವಣಗೆರೆ: ದಾವಣಗೆರೆ ವಿಶ್ವವಿದ್ಯಾಲಯ ವ್ಯಾಪ್ತಿಯ ಸರ್ಕಾರಿ ಪ್ರಥಮ ದರ್ಜೆ ಕಾಲೇಜುಗಳ 2023–24 ಮತ್ತು 2024–25ನೇ ಸಾಲಿನ ವಿದ್ಯಾರ್ಥಿಗಳಿಗೆ ಉದ್ಯೋಗ ಮೇಳ (Job Fair) ಆಯೋಜಿಸಲಾಗಿತ್ತು. ಈ ಮೇಳದಲ್ಲಿ 141 ವಿದ್ಯಾರ್ಥಿಗಳು ವಿವಿಧ ಕಂಪನಿಗಳಿಗೆ ಆಯ್ಕೆಯಾಗಿದ್ದು, 16 ವಿದ್ಯಾರ್ಥಿಗಳಿಗೆ ತಕ್ಷಣದಲ್ಲಿ ಆದೇಶ ಪ್ರತಿಯನ್ನು ನೀಡಲಾಯಿತು.

ಕರ್ನಾಟಕ ಸರ್ಕಾರದ ಕಾಲೇಜು ಮತ್ತು ತಾಂತ್ರಿಕ ಶಿಕ್ಷಣ ಇಲಾಖೆ, ಪ್ಲೇಸ್ಮೆಂಟ್ ಸೆಲ್ ಹಾಗೂ ಕರ್ನಾಟಕ ಕೌಶಲ್ಯಾಭಿವೃದ್ಧಿ ನಿಗಮದ ಸಂಯುಕ್ತ ಆಶ್ರಯದಲ್ಲಿ ನಗರದ ಸರ್ಕಾರಿ ಪ್ರಥಮ ದರ್ಜೆ ಕಾಲೇಜು ಆವರಣದಲ್ಲಿ ಮೇಳ ಆಯೋಜಿಸಲಾಗಿತ್ತು.

ಮುಖ್ಯ ಅತಿಥಿಗಳಾಗಿ ಭಾಗವಹಿಸಿದ ಪ್ರೊ. ನಾಗೇಶ್ ಮಾತನಾಡಿ, ವಿದ್ಯಾರ್ಥಿಗಳಲ್ಲಿ ಕೌಶಲ್ಯಾಭಿವೃದ್ಧಿ ಮತ್ತು ಉದ್ಯೋಗ ಸಜ್ಜುಗೊಳ್ಳುವುದು ಅತ್ಯಗತ್ಯ. ಉದ್ಯೋಗ ಮೇಳಗಳಂತಹ ವೇದಿಕೆಗಳು ವಿದ್ಯಾರ್ಥಿಗಳಿಗೆ ಕಂಪನಿಗಳೊಂದಿಗೆ ನೇರ ಸಂಪರ್ಕ ಕಲ್ಪಿಸುವ ಮೂಲಕ ಸ್ಪರ್ಧಾತ್ಮಕ ಯುಗದಲ್ಲಿ ತಮಗೆ ಬೇಕಾದ ಮಾರ್ಗವನ್ನು ತೋರಿಸುತ್ತವೆ ಎಂದು ಹೇಳಿದರು.

ಆನ್ಲೈನ್ ಮೂಲಕ ಕರ್ನಾಟಕ ಕೌಶಲ್ಯಾಭಿವೃದ್ಧಿ ಅಧಿಕಾರಿ ಸುಮತಿ ಮಾತನಾಡಿ ಕೌಶಲ್ಯ ಶಿಕ್ಷಣದಲ್ಲಿ ಮಹತ್ವದ ಪಾತ್ರ ವಹಿಸುತ್ತಿದೆ ಪ್ರತಿಯೊಬ್ಬ ಸರ್ಕಾರಿ ಕಾಲೇಜಿನ ವಿದ್ಯಾರ್ಥಿಗಳು ಕೌಶಲ್ಯಭರಿತ ಆಗಬೇಕೆಂದು ಹೇಳಿದರು.

ಪ್ರಾಸ್ತಾವಿಕ ಮಾತನಾಡಿದ ಡಾ. ವೆಂಕಟೇಶ್ ಬಾಬು, ಈ ಹಿಂದೆ ಪದವಿಯೊಂದಿಗೆ ಕೌಶಲ್ಯ ಎನ್ನುವ ಮಾತೃಡಿಯಲ್ಲಿತ್ತು. ಆದರೆ, ಈಗ ಕೌಶಲ್ಯವೇ ಪದವಿಯಾಗಿದೆ ವಿದ್ಯಾರ್ಥಿಗಳು ಪದವಿಯೊಂದಿಗೆ ಕೌಶಲ್ಯ ಪಡೆಯುವುದರ ಬದಲು ಕೌಶಲ್ಯವೇ ಪದವಿನ್ನಾಗಿ ಮಾಡಿಕೊಂಡರೆ ಅವರಿಗೆ ಮಾರುಕಟ್ಟೆಯಲ್ಲಿ ಬೇಡಿಕೆ ಹೆಚ್ಚಾಗುತ್ತದೆ. ಆ ನಿಟ್ಟಿನಲ್ಲಿ ಸರ್ಕಾರಿ ಕಾಲೇಜುಗಳಲ್ಲಿ ಕಲಿಕೆ ಜೊತೆ ಕೌಶಲ್ಯ ಎಂಬ ವಿಷಯದಲ್ಲಿ ವಿವಿಧ ರೀತಿಯ ಕೋರ್ಸ್ಗಳ ತರಬೇತಿಯನ್ನು ನೀಡಿ, ಆ ವಿದ್ಯಾರ್ಥಿಗಳಿಗೆ ಉದ್ಯೋಗ ನೀಡುವ ಉದ್ದೇಶದಿಂದ ಈ ಉದ್ಯೋಗಗಳನ್ನು ಆಯಸಲಾಗಿದೆ. ಇತರದ ಕಾರ್ಯಕ್ರಮಗಳು ವಿದ್ಯಾರ್ಥಿಗಳಲ್ಲಿ ಧನಾತ್ಮಕ ಮನೋಭಾವವನ್ನು ಬೆಳೆಸುತ್ತವೆ ಹಾಗೂ ತಮ್ಮ ಮುಂದಿನ ಜೀವನಕ್ಕೆ ದಾರಿ ಮಾಡಿಕೊಡುತ್ತವೆ ಎಂದು ಹೇಳಿದರು.

ಕಾರ್ಯಕ್ರಮದಲ್ಲಿ ಡಾ. ಸಿದ್ಧೇಶ್ ಎಸ್ ಡಾ. ನಾಗರಾಜ ತಳವಾರ ಡಾ ಗುರುರಾಜ ಜಿ ಪಿ ಶ್ರೀಮತಿ ಪ್ರತಿಭಾ ಉಪಸ್ಥಿತರಿದ್ದರು.ವಿದ್ಯಾರ್ಥಿಗಳ ಉದ್ಯೋಗಾಭಿಲಾಷೆ, ಕೌಶಲ್ಯಾಭ್ಯಾಸ, ಸ್ವಯಂವಿಶ್ವಾಸ ಮತ್ತು ಹೊಸ ಅವಕಾಶಗಳನ್ನು ಬಳಸಿಕೊಳ್ಳುವ ಕುರಿತು ಅಮೂಲ್ಯ ಸಲಹೆಗಳನ್ನು ನೀಡಿದರು.

ಈ ಮೇಳದಲ್ಲಿ ನಾನಾ ಕ್ಷೇತ್ರಗಳ ಹಲವು ಪ್ರಮುಖ ಕಂಪನಿಗಳು ಪಾಲ್ಗೊಂಡಿದ್ದು, ಸುಮಾರು 850ಕ್ಕೂ ಹೆಚ್ಚು ವಿದ್ಯಾರ್ಥಿಗಳು ನೊಂದಾಯಿಸಿಕೊಂಡಿದ್ದರು. ವಿದ್ಯಾರ್ಥಿಗಳಿಗೆ ನೇರ ಸಂದರ್ಶನ, ಕೌನ್ಸೆಲಿಂಗ್ ಮತ್ತು ಉದ್ಯೋಗ ಮಾಹಿತಿ ನೀಡುವ ಅವಕಾಶ ಒದಗಿತು. ಬಹುತೇಕ ವಿದ್ಯಾರ್ಥಿಗಳು ಇಲ್ಲಿ ಭಾಗವಹಿಸಿ ತಮ್ಮ ವೃತ್ತಿ ಭವಿಷ್ಯದತ್ತ ಹೊಸ ಹೆಜ್ಜೆ ಇಟ್ಟರು.

ಉದ್ಯೋಗ ಮಾಡಿದಲ್ಲಿ ಭಾಗವಹಿಸಿದ ಒಟ್ಟು ವಿದ್ಯಾರ್ಥಿಗಳಲ್ಲಿ 141 ವಿದ್ಯಾರ್ಥಿಗಳು ವೇದ ಕಂಪನಿಗಳಿಗೆ ವಿವಿಧ ಹುದ್ದೆಗಳಿಗಾಗಿ ಆಯ್ಕೆಯಾದರೂ 16 ವಿದ್ಯಾರ್ಥಿಗಳಿಗೆ ತಕ್ಷಣದಲ್ಲಿ ಆದೇಶ ಪ್ರತಿಯನ್ನು ನೀಡಲಾಯಿತು ಕಾರ್ಯಕ್ರಮದ ನಿರೂಪಣೆಯನ್ನು ಪ್ರೊ ಚೈತ್ರ ಪಿ ಅವರು ನೆರವೇರಿಸಿದರು ಕಾರ್ಯಕ್ರಮದ ಪ್ರಾರ್ಥನೆಯನ್ನು ವಿದ್ಯಾರ್ಥಿ ಮುಕೇಶ್ ನೆರವೇರಿಸಿದರೆ ಅತಿಥಿಗಳಿಗೆ ಸ್ವಾಗತವನ್ನು ಪ್ರೋ ಸಂಗಪ್ಪ ಅವರು ನೆರವೇರಿಸಿದರು ಅಂತಿಮವಾಗಿ ಕಾರ್ಯಕ್ರಮದ ವಂದನಾರ್ಪಣೆಯನ್ನು ಪ್ರಭು ನಾಯಕ ಮಾಡಿದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *