ಡಿವಿಜಿ ಸುದ್ದಿ, ಬೆಂಗಳೂರು: ಕೃಷ್ಣಾ ಮೇಲ್ದಂಡೆ ಯೋಜನೆಯ 3 ಹಂತದ ಕಾಮಗಾರಿ ಅನುಷ್ಠಾನಕ್ಕೆ 10,000 ಕೋಟಿ ಅನುದಾನ ಘೋಷಣೆ ಮಾಡಿದ್ದು, ಕ್ರಿಯಾ ಯೋಜನೆ ರೂಪಿಸಲಾಗುವುದು ಎಂದು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ತಿಳಿಸಿದ್ದಾರೆ.
ವಿಧಾನಸಭೆಯಲ್ಲಿ ಈ ಘೋಷಿಸಿದ ಅವರು, ಕೃಷ್ಣಾ ಮೇಲ್ದಂಡೆ ಯೋಜನೆ 3ನೇ ಹಂತದ ಕಾಮಗಾರಿ ಹಾಗೂ 27 ಹಳ್ಳಿಗಳ ಪುನರ್ ವಸತಿ ಮತ್ತು ಪುನರ್ ನಿರ್ಮಾಣ ಮಾಡಲಾಗುವುದು. 3 ವರ್ಷಗಳಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುತ್ತದೆ. ಈಗಾಗಲೇ ಹಣಕಾಸು ಇಲಾಖೆಯ ಅಧಿಕಾರಿಗಳ ಜೊತೆ ಚರ್ಚಿಸಿ ಈ ನಿರ್ಧಾರ ಮಾಡಿದ್ದೇವೆ ಎಂದರು.
ಕೇಂದ್ರ ಸರ್ಕಾರದ ಪ್ರಮುಖರ ಜೊತೆ ಚರ್ಚಿಸಿ ಹೆಚ್ಚುವರಿ ಅನುದಾನ ತರುತ್ತೇನೆ. ಈ ಬಗ್ಗೆ ಬಜೆಟ್ ನಲ್ಲಿ ಪ್ರಕಟಿಸಿಲ್ಲ ಎಂದರು



