ದಾವಣಗೆರೆ: ಪ್ರಸಕ್ತ ಸಾಲಿನಲ್ಲಿ ನ್ಯಾಷನಲ್ ಕೌನ್ಸಿಲ್ ಫಾರ್ ಟೀಚರ್ ಎಜುಕೇಶನ್ನಿಂದ ಮಾನ್ಯತೆ ಪಡೆದಿರುವ ದಾವಣಗೆರೆ ಜಿಲ್ಲೆಯ ಸರ್ಕಾರಿ, ಅರೆ ಸರ್ಕಾರಿ, ಅನುದಾನಿತ ಹಾಗೂ ಖಾಸಗಿ ಕಾಲೇಜುಗಳಲ್ಲಿ ದಾಖಲಾತಿ ಹೊಂದಿ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ಅಲ್ಪಸಂಖ್ಯಾತರ ಸಮುದಾಯದ(ಮುಸ್ಲಿಂ, ಕ್ರಿಶ್ಚಿಯನ್, ಜೈನ್, ಸಿಖ್, ಬೌದ್ಧ, ಮತ್ತು ಪಾರ್ಸಿ) ವಿದ್ಯಾರ್ಥಿಗಳಿಗೆ 25 ಸಾವಿರ ಪ್ರೋತ್ಸಾಹ ಧನಕ್ಕೆ ಅರ್ಜಿ ಆಹ್ವಾನಿಸಲಾಗಿದೆ.
ದಾವಣಗೆರೆ; ಅಡಿಕೆ ದರ ಸ್ಥಿರ; ಡಿ.1ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ವಿದ್ಯಾರ್ಥಿಗಳಿಗೆ ರೂ. 25000/-ಗಳ ವಿಶೇಷ ಪ್ರೋತ್ಸಾಹಧನವನ್ನು ಸಂಬಂಧಪಟ್ಟ ವಿದ್ಯಾರ್ಥಿಗಳ ಖಾತೆಗೆ ಡಿಬಿಟಿ ಮುಖಾಂತರ ಜಮಾ ಮಾಡಲಾಗುವುದು. ಆಸಕ್ತರು ಅಲ್ಪಸಂಖ್ಯಾತರ ಸಮುದಾಯದ ಬಿ.ಎಡ್ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಎಲ್ಲಾ ದಾಖಲಾತಿಗಳ ಸಹಿತ ಸೇವಾಸಿಂಧು ಪೋರ್ಟಲ್ (https://sevasindhu.karnataka.gov.in) ಮುಖಾಂತರ ಆನ್ಲೈನ್ನಲ್ಲಿ ಅರ್ಜಿ ಸಲ್ಲಿಸಬಹುದು. ಅರ್ಜಿ ಸಲ್ಲಿಸಲು ಡಿಸೆಂಬರ್ 31 ಕೊನೆಯ ದಿನವಾಗಿರುತ್ತದೆ.
ಹೆಚ್ಚಿನ ಮಾಹಿತಿಗಾಗಿ ಜಿಲ್ಲಾ ಅಲ್ಪಸಂಖ್ಯಾತರ ಕಲ್ಯಾಣ ಇಲಾಖೆ ದಾವಣಗೆರೆ. ದೂ.ಸಂ: 08192-250022 ಹಾಗೂ ವಿಸ್ತರಣಾಧಿಕಾರಿಗಳು ಅಲ್ಪಸಂಖ್ಯಾತರಕಲ್ಯಾಣ ಇಲಾಖೆ ದಾವಣಗೆರೆ ಉಪ ವಿಭಾಗ, ದೂ.ಸಂ: 08192-250066 ಸಂಪರ್ಕಿಸಬೇಕೆಂದು ಇಲಾಖೆಯ ಅಧಿಕಾರಿ ತಿಳಿಸಿದ್ದಾರೆ.



