ಬೆಂಗಳೂರು: ರಾಜ್ಯದಲ್ಲಿ ತೀವ್ರ ಚಳಿ ನಡುವೆಯೇ ಮುಂದಿನ 5 ದಿನ ರಾಜ್ಯದ ಕೆಲ ಭಾಗದಲ್ಲಿ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಸೂಚನೆ ನೀಡಿದೆ.
ವಿದ್ಯಾರ್ಥಿಗಳಿಗೆ 25 ಸಾವಿರ ಪ್ರೋತ್ಸಾಹಧನಕ್ಕೆ ಅರ್ಜಿ ಆಹ್ವಾನ
ದಕ್ಷಿಣ ಒಳನಾಡು ಮತ್ತು ಕರಾವಳಿ ಭಾಗದಲ್ಲಿ ಸಾಧಾರಣ ಮಳೆಯಾಗುವ ನಿರೀಕ್ಷೆ ಇದೆ. ಉತ್ತರ ಒಳನಾಡು ಭಾಗದಲ್ಲಿ ಒಣ ಹವೆ ಮುಂದುವರಿಯಲಿದೆ. ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ ಹಾಗೂ ಚಿಕ್ಕಬಳ್ಳಾಪುರ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಮಳೆಯಾಗಲಿದೆ ಎಂದು ಹವಾಮಾನ ಇಲಾಖೆ ಮಾಹಿತಿ ನೀಡಿದೆ.
ದಾವಣಗೆರೆ; ಅಡಿಕೆ ದರ ಸ್ಥಿರ; ಡಿ.1ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಬಳ್ಳಾರಿ, ಬೆಂಗಳೂರು ಗ್ರಾಮೀಣ, ಚಿಕ್ಕಮಗಳೂರು, ಚಿತ್ರದುರ್ಗ, ದಾವಣಗೆರೆ, ಹಾಸನ, ಕೊಡಗು, ಕೋಲಾರ, ಶಿವಮೊಗ್ಗ, ತುಮಕೂರು ಹಾಗೂ ವಿಜಯನಗರ ಜಿಲ್ಲೆಗಳು, ಉತ್ತರ ಒಳನಾಡು ಹಾಗೂ ಕರಾವಳಿ ಭಾಗದ ಜಿಲ್ಲೆಗಳಲ್ಲಿ ಒಣ ಹವಾಮಾನ ಇರಲಿದೆ.
ದಕ್ಷಿಣ ಕನ್ನಡ ಮತ್ತು ಉಡುಪಿ ಜಿಲ್ಲೆಗಳ ಒಂದೆರಡು ಕಡೆಗಳಲ್ಲಿ ಹಗುರದಿಂದ ಸಾಧಾರಣ ಮಳೆಯಾಗಲಿದೆ. ಚಿಕ್ಕಮಗಳೂರು, ಹಾಸನ, ಕೊಡಗು, ಮೈಸೂರು, ಮಂಡ್ಯ, ಚಾಮರಾಜನಗರ, ಬೆಂಗಳೂರು ದಕ್ಷಿಣ, ಬೆಂಗಳೂರು ಗ್ರಾಮೀಣ, ತುಮಕೂರು, ಚಿಕ್ಕಬಳ್ಳಾಪುರ ಹಾಗೂ ಕೋಲಾರ ಜಿಲ್ಲೆ ಕೆಲವೆಡೆ ಹಗುರ ಮಳೆಯಾಗಬಹುದು ಎಂದು ತಿಳಿಸಲಾಗಿದೆ.
ಮುಂದಿನ 48 ಗಂಟೆಗಳ ಕಾಲ ಬೆಂಗಳೂರು ನಗರ ಹಾಗೂ ಸುತ್ತಮುತ್ತಲಿನ ಪ್ರದೇಶದಲ್ಲಿ ಬೆಳಗಿನ ಜಾವ ಹೆಚ್ಚಿನ ಪ್ರಮಾಣದಲ್ಲಿ ಮಂಜು ಬೀಳಲಿದೆ.



