ದಾವಣಗೆರೆ: ಜಿಲ್ಲೆಯಲ್ಲಿ ಬಿಎಸ್‌ಎನ್‌ಎಲ್ ಮೊಬೈಲ್ ಟವರ್ ಸ್ಥಾಪನೆ ಕುರಿತು ಸಂಸತ್ ಅಧಿವೇಶನದ ಶೂನ್ಯ ವೇಳೆಯಲ್ಲಿ ಸಂಸದೆ ಪ್ರಭಾ ಮಲ್ಲಿಕಾರ್ಜುನ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದರು.
ದಾವಣಗೆರೆ | ಕುಸಿತ ಹಾದಿ ಹಿಡಿದ ಅಡಿಕೆ ದರ- ಡಿ.3ರ ಕನಿಷ್ಠ, ಗರಿಷ್ಠ ದರ ಎಷ್ಟಿದೆ..?
ಲೋಕಸಭೆಯಲ್ಲಿ ಮಾತನಾಡಿ, ಎಲ್ಲಾ ಗ್ರಾಮಗಳಿಗೆ ಸಂಪರ್ಕ ಖಚಿತಪಡಿಸುವುದು ಡಿಜಿಟಲ್ ಇಂಡಿಯಾ ಮಿಷನ್ ಮೂಲಭೂತ ಉದ್ದೇಶ. ಆದರೆ, ದಾವಣಗೆರೆ ಲೋಕಸಭಾ ಕ್ಷೇತ್ರದ ಚನ್ನಗಿರಿ ತಾಲ್ಲೂಕಿನ ಹಾಲೇಶಪುರ, ಅರಳಿಕಟ್ಟೆ, ಚಿಕ್ಕಕೋಗಲೂರು ಗ್ರಾಮಗಳು, ಹೊನ್ನಾಳಿ ತಾಲ್ಲೂಕಿನ ಮುಸ್ಸೇನಹಾಳು ಗ್ರಾಮ ಹಾಗೂ ಹರಪನಹಳ್ಳಿ ತಾಲ್ಲೂಕಿನ ಕೊಂಗನಹೊಸೂರು ಮತ್ತು ಒಳತಾಂಡಾ ಗ್ರಾಮಗಳ ಜನತೆ ಇಂದಿಗೂ ಕೂಡ ಮೂಲಭೂತ ಮೊಬೈಲ್ ನೆಟ್‌ವರ್ಕ್ ಸೌಲಭ್ಯವಿಲ್ಲದೆ ದೈನಂದಿನ ತೊಂದರೆ ಅನುಭವಿಸುತ್ತಿದ್ದಾರೆ ಎಂದರು.
ಈ ವಿಷಯವನ್ನು ಹಲವಾರು ಬಾರಿ ಸಂಬಂಧಿತ ಅಧಿಕಾರಿಗಳ ಗಮನಕ್ಕೆ ತಂದಿದ್ದರೂ ಯಾವುದೇ ಪ್ರಗತಿ ಕಂಡುಬಂದಿಲ್ಲ. ಈ ವಿಷಯದ ಬಗ್ಗೆ ಈಗಾಗಲೇ ಶಿವಮೊಗ್ಗ ವಲಯ ಕಚೇರಿಗೆ ನಾಲ್ಕು ಪತ್ರಗಳು, ಬಳ್ಳಾರಿ ವಲಯ ಕಚೇರಿಗೆ ಎರಡು ಪತ್ರಗಳು ಹಾಗು ಸಂವಹನ ಸಚಿವಾಲಯಕ್ಕೆ ಪತ್ರಗಳನ್ನು ಕಳುಹಿಸಲಾಗಿದೆ. ಸಂಹವನ ಸಚಿವಾಲಯದಿಂದ ಉತ್ತರ ಬಂದಿದ್ದರೂ ಬಿಎಸ್ಎನ್‌ಎಲ್ ಮೊಬೈಲ್ ಟವರ್ ಸ್ಥಾಪನೆ ಕುರಿತು ಯಾವುದೇ ಸ್ಪಷ್ಟ ಪ್ರಗತಿ ಕಂಡುಬಂದಿಲ್ಲ ಎಂದರು
ನೆಟ್ ವರ್ಕ್ ಸಮಸ್ಯೆಯಿಂದ ವಿದ್ಯಾರ್ಥಿಗಳು, ರೈತರು, ಸಣ್ಣ ವ್ಯಾಪಾರಿಗಳು ಸೇರಿದಂತೆ ಜನರು ಡಿಜಿಟಲ್ ಪೇಮೆಂಟ್, ಆನ್‌ಲೈನ್ ಶಿಕ್ಷಣ, ಟೆಲಿಮೆಡಿಸಿನ್, ತುರ್ತು ಸಂಪರ್ಕ ಸೇರಿದಂತೆ ಅನೇಕ ಸೇವೆಗಳಿಗೆ ಸಾಕಷ್ಟು ಅಡಚಣೆಯಾಗುತ್ತಿದೆ. ಈ ರೀತಿಯ ದೀರ್ಘಕಾಲದ ಸಂಪರ್ಕ ಕೊರತೆಯು ಗ್ರಾಮೀಣ-ನಗರ ಡಿಜಿಟಲ್ ಅಂತರವನ್ನು ಹೆಚ್ಚಿಸುತ್ತಿದ್ದು, ಮೂಲಭೂತ ಸೇವೆಗಳು ತೊಂದರೆಯನ್ನು ಎದುರಿಸುತ್ತಿದ್ದಾರೆ ಎಂದರು.



