ಬೆಂಗಳೂರು: ಬಿಜೆಪಿ ಮಾಜಿ ಸಚಿವ ಎಂಪಿ ರೇಣುಕಾಚಾರ್ಯ ಇಂದು (ಜ.03) ಡಿಸಿಎಂ ಡಿಕೆ ಶಿವಕುಮಾರ್ ನಿವಾಸಕ್ಕೆ ದಿಢೀರ್ ಭೇಟಿ ನೀಡಿ ಸುಮಾರು 20 ನಿಮಿಷಗಳ ಚರ್ಚೆ ನಡೆಸಿದ್ದಾರೆ. ಉಭಯ ಪಕ್ಷಗಳ ನಾಯಕರ ಭೇಟಿ ಕುತೂಹಲ ಮೂಡಿಸಿದೆ.
ದಾವಣಗೆರೆ: ಜಿಲ್ಲೆಗೆ ಎರಡು ಶ್ರಮಿಕ ವಸತಿ ಶಾಲೆ ಮಂಜೂರು
ಬಳಿಕ ಮಾಧ್ಯಮದವರೊಂದಿಗೆ ಮಾತನಾಡಿದ ಎಂಪಿ ರೇಣುಕಾಚಾರ್ಯ, ನಾನು ಇಂದು ಡಿಸಿಎಂ ಡಿಕೆ ಶಿವಕುಮಾರ್ ಭೇಟಿಯಾಗಿ ನನ್ನ ಮತ ಕ್ಷೇತ್ರದ ವಿಷಯವಾಗಿ ಮಾತುಕತೆ ನಡೆಸಿದ್ದೇನೆ. ಮುಖ್ಯವಾಗಿ ಅವರಿಗೆ ಹೊಸ ವರ್ಷದ ಶುಭಾಶಯ ಹೇಳಿದ್ದೇನೆ ಎಂದರು.
ಪ್ರೋತ್ಸಾಹ ಧನ ಯೋಜನೆ: ಪ್ರಥಮ ದರ್ಜೆಯಲ್ಲಿ ಪಾಸ್ ಆದ ವಿದ್ಯಾರ್ಥಿಗಳಿಗೆ 50 ಸಾವಿರದವರೆಗೆ ಪ್ರೋತ್ಸಾಹ ಧನ
ಭದ್ರಾ ಜಲಾಶಯ ದಾವಣಗೆರೆ ಜಿಲ್ಲೆಯ ಜೀವಜಲ. ಒಟ್ಟು.1.5 ಲಕ್ಷ ಹೆಕ್ಟೇರ್ ಅಚ್ಚುಕಟ್ಟು ಇದೆ. ಅದನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸಲು ಹೊರಟಿದ್ದಾರೆ. ಆದರೆ ಭದ್ರಾ ಜಲಾಶಯವನ್ನು ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸಿದರೆ ನಮ್ಮ ದಾವಣಗೆರೆ ಹಕ್ಕು ಕಳೆದುಕೊಳ್ಳುತ್ತದೆ. ಹೀಗಾಗಿ ನಾನು ಆ ಕ್ರಮ ತೆಗೆದುಕೊಳ್ಳುವುದು ಬೇಡ ಎಂದು ಮನವಿ ಮಾಡಲು ಡಿಸಿಎಂ ಅವರನ್ನು ಭೇಟಿಯಾಗಿದ್ದಾಗಿ ತಿಳಿಸಿದ್ದಾರೆ.
ಭದ್ರಾ ಜಲಾಶಯ ವಿಶ್ವೇಶ್ವರಯ್ಯ ಜಲ ನಿಗಮಕ್ಕೆ ಸೇರಿಸದೆ ಕರ್ನಾಟಕ ನೀರಾವರಿ ನಿಗಮದಲ್ಲೇ ಉಳಿಸುವಂತೆ ಎ ಮನವಿ ಮಾಡಿದ್ದೇನೆ ಎಂದರು.
ಭದ್ರಾ ಜಲಾಶಯ; ಜ.3ರಿಂದ ಎಡದಂಡೆ, ಜ.8ರಿಂದ ಬಲದಂಡೆ ನಾಲೆಗೆ ಹರಿಸಲು ತೀರ್ಮಾನ
ಡಿಸಿಎಂ ಅವರೊಂದಿಗೆ 20 ನಿಮಿಷ ಆತ್ಮೀಯವಾಗಿ ಮಾತನಾಡಿದ್ದಾರೆ. ಇದರಿಂದ ಬಹಳ ಸಂತೋಷವಾಗಿದೆ. ನಾನು ಅವರೊಂದಿಗೆ ಯಾವುದೇ ರಾಜಕೀಯ ವಿಷಯವನ್ನು ಚರ್ಚೆ ಮಾಡಿಲ್ಲ. ಭದ್ರಾ ಜಲಾಶಯ ನಮ್ಮ ಹಕ್ಕು. ಅದರ ಹಕ್ಕನ್ನು ಕಳೆದುಕೊಳ್ಳುವುದು ಬೇಡ ಎಂಬ ಉದ್ದೇಶದಿಂದ ಈ ವಿನಂತಿ ಮಾಡಿದ್ದೇನೆ. ಈ ಬಗ್ಗೆ ಡಿಸಿಎಂ, ಸಿಎಂ ಸಿದ್ದರಾಮಯ್ಯ ಅವರೊಂದಿಗೆ ಈ ಬಗ್ಗೆ ಚರ್ಚೆ ಮಾಡುವುದಾಗಿ ತಿಳಿಸಿದ್ದಾರೆ ಎಂದರು.



