ನವದೆಹಲಿ: ಮಧ್ಯಪ್ರದೇಶದ ಕಾಂಗ್ರೆಸ್‌ನ ಬಂಡಾಯ ನಾಯಕ ಜ್ಯೋತಿರಾದಿತ್ಯ ಸಿಂಧಿಯಾ ಅವರು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದಾರೆ. ಮಧ್ಯಪ್ರದೇಶದಲ್ಲಿ ಕಾಂಗ್ರೆಸ್ ಬಂಡಾಯ ನಾಯಕರಾಗಿ ಗುರುತಿಸಿಕೊಂಡಿದ್ ರಾಜ ಮನೆತನದ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ತನ್ನತ್ತ ಸೆಳೆಯಲು ಬಿಜೆಪಿ ಯಶಸ್ವಿಯಾಗಿದೆ. ರಾಜ್ಯಸಭೆ ಟಿಕೆಟ್ ನೀಡುವ ಸಾಧ್ಯತೆ ಇದೆ.
Congress leader Jyotiraditya Scindia tenders resignation to Congress President Sonia Gandhi pic.twitter.com/GcDKu3BLw8
— ANI (@ANI) March 10, 2020
ಮುಂದೆ ಸಾಗಲು ನನಗೆ ಇದು ಸೂಕ್ತ ಸಮಯವೆಂದು ಜ್ಯೋತಿರಾದಿತ್ಯ ಸಿಂಧಿಯಾ ಅವರು ಸೋನಿಯಾ ಗಾಂಧಿ ಅವರಿಗೆ ಬರೆದಿರುವ ರಾಜೀನಾಮೆ ಪತ್ರದಲ್ಲಿ ಉಲ್ಲೇಖಿಸಿದ್ದಾರೆ. ಈ ಮೂಲಕ ಕಾಂಗ್ರೆಸ್ ಜ್ಯೋತಿರಾದಿತ್ಯ ಸಿಂಧಿಯಾ ಅವರನ್ನು ಪಕ್ಷದಿಂದ ಉಚ್ಚಾಟಿಸಿದೆ. ಜ್ಯೋತಿರಾದಿತ್ಯ ಸಿಂದಿಯಾ ಅವರು ರಾಜಸ್ಥಾನದ ಬಿಜೆಪಿ ನಾಯಕಿ, ಮಾಜಿ ಮುಖ್ಯಮಂತ್ರಿ ವಸುಂಧರಾ ರಾಜೆ ಅವರ ಸೋದರಳಿಯ.