ದಾವಣಗೆರೆ: ಹರಿಹರ ಬಿಜೆಪಿ ಶಾಸಕ ಬಿ.ಪಿ.ಹರೀಶ್ ವಿರುದ್ಧ ಜಾತಿನಿಂದನೆ ಕೇಸ್ ದಾಖಲಾಗಿದೆ. ದಾವಣಗೆರೆಯ ಡಿಸಿಆರ್ಇ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ದಾವಣಗೆರೆ: ರಸ್ತೆಯಲ್ಲಿ ಕಳೆದುಕೊಂಡಿದ್ದ ಚಿನ್ನಾಭರಣ ಕೆಲವೇ ಗಂಟೆಯಲ್ಲಿ ಪತ್ತೆ
ಕೆರೆಯ ಮಣ್ಣು ತುಂಬುವ ವಿಚಾರದಲದಲಿ ಜಾತಿನಿಂದನೆ ಆರೋಪದಡಿ ಈ ಪ್ರಕರಣ ದಾಕಲಾಗಿದೆ. ದಾವಣಗೆರೆ ತಾಲ್ಲೂಕಿನ ಕಾಡಜ್ಜಿ ಕೆರೆಯ ಅಂಗಳದಲ್ಲಿ ವ್ಯವಸಾಯಕ್ಕೆಂದು ಟ್ರ್ಯಾಕ್ಟರ್ ಗೆ ಮಣ್ಣನ್ನು ತುಂಬಿಕೊಳ್ಳುತ್ತಿದ್ದಾಗ ಸ್ಥಳಕ್ಕೆ ಬಂದ ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಆಪ್ತ ಸಹಾಯಕ ಜಾತಿ ನಿಂದನೆ ಮಾಡಿದ್ದಾರೆಂದು ಕಾಡಜ್ಜಿ ಗ್ರಾಮದ ಭೋವಿ ಸಮುದಾಯದ ಕಾಂತರಾಜ್ ಎಚ್. ದೂರು ನೀಡಿದ್ದಾರೆ.
ದಾವಣಗೆರೆ ಉಪಚುನಾವಣೆ: ಕುಟುಂಬ ರಾಜಕಾರಣಕ್ಕೆ ಮಣಿ ಹಾಕಬೇಡಿ; ಅಹಿಂದ ವರ್ಗಕ್ಕೆ ಟಿಕೆಟ್ ನೀಡಿ
ಅವರ ದೂರಿನ ಹಿನ್ನೆಲೆ ಪೊಲೀಸರು ಶಾಸಕ ಬಿ.ಪಿ.ಹರೀಶ್, ಅವರ ಪುತ್ರ ಹಾಗೂ ಶಾಸಕರ ಆಪ್ತ ಸಹಾಯಕನ ವಿರುದ್ಧ ಎಸ್ ಸಿ, ಎಸ್ ಟಿ ದೌರ್ಜನ್ಯ ತಡೆ ಕಾಯ್ದೆಯಡಿ ಪ್ರಕರಣ ದಾಖಲಾಗಿದೆ.



