ದಾವಣಗೆರೆ: ಮತದಾರರ ಪಟ್ಟಿ ಪರಿಷ್ಕರಣೆ; ಜ.24ರವರೆಗೆ ಆಕ್ಷೇಪಣೆ ಸಲ್ಲಿಸಲು ಅವಕಾಶ

Dvgsuddi
By
Dvgsuddi
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ....
3 Min Read

ದಾವಣಗೆರೆ: ದಾವಣಗೆರೆ ದಕ್ಷಿಣ ವಿಧಾನಸಭಾ ಕ್ಷೇತ್ರದ ಮತದಾರರ ಪಟ್ಟಿಯ ವಿಶೇಷ ಸಂಕ್ಷಿಪ್ತ ಪರಿಷ್ಕರಣೆ ಕಾರ್ಯಕ್ಕೆ ಸಂಬಂಧಿಸಿದಂತೆ ಮತದಾರರ ಪಟ್ಟಿ ವೀಕ್ಷಕರು, ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಪರಿಷ್ಕರಣೆ ನಡೆಯುತ್ತಿದೆ. ನಿಗದಿತ ಅವಧಿಯಲ್ಲಿ ಹಕ್ಕು, ಆಕ್ಷೇಣೆಗಳಿದ್ದಲ್ಲಿ ಸಲ್ಲಿಸಲು ಅವಕಾಶ ಕಲ್ಪಿಸಲಾಗಿದೆ ಎಂದು ಮತದಾರರ ಪಟ್ಟಿ ವೀಕ್ಷಕ ಡಾ; ಶಮ್ಲಾ ಇಕ್ಬಾಲ್ ತಿಳಿಸಿದರು.

ದಾವಣಗೆರೆ: ಕ್ರೀಡಾಪಟುಗಳಿಗೆ ಪ್ರೋತ್ಸಾಹಧನಕ್ಕಾಗಿ ಅರ್ಜಿ ಆಹ್ವಾನ

ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಜಿಲ್ಲಾಧಿಕಾರಿ ಹಾಗೂ ರಾಜಕೀಯ ಪಕ್ಷಗಳ ಮುಖಂಡರೊಂದಿಗೆ ಸಭೆ ನಡೆಸಿ ಮಾತನಾಡಿದರು.ಜನವರಿ 3 ರಂದು ಸಮಗ್ರ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿ, ರಾಜಕೀಯ ಪಕ್ಷಗಳಿಗೆ ನೀಡಲಾಗಿದೆ.

ದಾವಣಗೆರೆ ಬಿಜೆಪಿ; ಬಣ ರಾಜಕೀಯಕ್ಕೆ ಬ್ರೇಕ್..?; ಭಿನ್ನಮತ ಮರೆತು ಒಂದಾಗಲು ನಾಯಕರ ಒಲವು..!!; ಶಾಸಕ ಹರೀಶ್ ವಿರುದ್ಧ ಪ್ರಕರಣದಲ್ಲಿ ಹೋರಾಟಕ್ಕೆ ಸಜ್ಜು..!!

ಆಕ್ಷೇಪಣೆ ಮತ್ತು ಹಕ್ಕುಗಳನ್ನು ಸಲ್ಲಿಸಲು ಜನವರಿ 24 ರವರೆಗೆ ಅವಕಾಶವಿದೆ. ಜನವರಿ 11 ರಂದು ನಡೆದ ವಿಶೇಷ ಅಭಿಯಾನದಲ್ಲಿ 85 ರ‍್ಜಿಗಳು ಸ್ವೀಕೃತವಾಗಿದ್ದು, ಮುಂದಿನ ಅಭಿಯಾನವು ಜನವರಿ 18 ರಂದು ನಡೆಯಲಿದೆ. ಫೆಬ್ರವರಿ 14 ರಂದು ಅಂತಿಮ ಮತದಾರರ ಪಟ್ಟಿಯನ್ನು ಪ್ರಕಟಿಸಲಾಗುವುದು ಎಂದರು.

ಮತಗಟ್ಟೆಗಳ ಪುನರ್ ವಿಂಗಡಣೆ

ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಈ ಹಿಂದೆ 217 ಮತಗಟ್ಟೆಗಳಿದ್ದವು. ನಿಯಮದಂತೆ 1200 ಕ್ಕಿಂತ ಹೆಚ್ಚು ಮತದಾರರಿರುವ ಕಡೆ ಹೊಸ ಮತಗಟ್ಟೆಗಳನ್ನು ಸೃಜಿಸಿ, ಪ್ರಸ್ತುತ ಒಟ್ಟು 284 ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. ಇದರಲ್ಲಿ 24 ಮತಗಟ್ಟೆಗಳ ಸ್ಥಳ ಬದಲಾವಣೆ ಮಾಡಲಾಗಿದ್ದು, ಮೂಲಭೂತ ಸೌಕರ್ಯಗಳಾದ ರ‍್ಯಾಂಪ್ ಮುಂತಾದವುಗಳನ್ನು ಒದಗಿಸಲು ಕ್ರಮ ವಹಿಸಲಾಗಿದೆ ಎಂದರು.

ಅಜೀಂ ಪ್ರೇಂ ಜೀ ಫೌಂಡೇಶನ್‌ ನಿಂದ ಪದವಿ ವಿದ್ಯಾರ್ಥಿನಿಯರಿಗೆ ಪ್ರತಿ ವರ್ಷ 30 ಸಾವಿರ ವಿದ್ಯಾರ್ಥಿವೇತನ; ಜ.31 ಅರ್ಜಿ ಸಲ್ಲಿಸಲು ಕೊನೆ ದಿನ

ಮತದಾರರ ಹೆಸರು ಸೇರ್ಪಡೆಗೆ ಅವಕಾಶ

ರಾಜಕೀಯ ಪಕ್ಷಗಳಿಗೆ ಎರಡು ಪ್ರಮುಖ ಮನವಿಗಳನ್ನು ಮಾಡಿ ಬಿಎಲ್‌ಎ ಪ್ರತಿಯೊಂದು ಮತಗಟ್ಟೆ ಮಟ್ಟದಲ್ಲಿ ರಾಜಕೀಯ ಪಕ್ಷಗಳು ತಮ್ಮ ಏಜೆಂಟ್ಗಳನ್ನು ನೇಮಕ ಮಾಡಿ ಪಟ್ಟಿಯನ್ನು ನೀಡಬೇಕು. ಇದರಿಂದ ಮೃತ ಮತದಾರರ ಹೆಸರು ಕೈಬಿಡುವುದು ಮತ್ತು ವಿಳಾಸ ಬದಲಾವಣೆ ಕರ‍್ಯ ಸುಲಭವಾಗುತ್ತದೆ. ಹೆಸರು ಸರ್ಪಡೆಗೆ ಯುವ ಮತದಾರರು ಹಾಗೂ ಕೈಬಿಟ್ಟು ಹೋದ ಮತದಾರರ ಹೆಸರನ್ನು ಸೇರಿಸಲು ಸಹಕರಿಸಬೇಕು ಎಂದರು.

ಕ್ಷೇತ್ರದ ಮತದಾರರ ವಿವರ

ಕರಡು ಪಟ್ಟಿಯಂತೆ ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಒಟ್ಟು 2,31,158 ಮತದಾರರಿದ್ದಾರೆ. ಇದರಲ್ಲಿ ಪುರುಷ ಮತದಾರರು 1,13,555 ಹಾಗೂ ಮಹಿಳಾ ಮತದಾರರು 1,17,603 ಇದ್ದು, ಮಹಿಳಾ ಮತದಾರರೇ ಹೆಚ್ಚಿನ ಸಂಖ್ಯೆಯಲ್ಲಿದ್ದಾರೆ.

ಲಿಂಗ ಅನುಪಾತ: ಕ್ಷೇತ್ರದ ಮತದಾರರ ಪಟ್ಟಿಯಲ್ಲಿನ ಲಿಂಗ ಅನುಪಾತವು 1036 ಆಗಿದ್ದು, ಇದು ಜಿಲ್ಲೆಯ ಜನಗಣತಿ ಅನುಪಾತಕ್ಕಿಂತ 972 ಮತ್ತು ರಾಜ್ಯದ ಸರಾಸರಿಗಿಂತಲೂ ಹೆಚ್ಚಿದೆ. ಮತದಾರರ ಜನಸಂಖ್ಯೆ ಅನುಪಾತ ಶೇ. 83.62 ರಷ್ಟಿದೆ. ಯುವ ಮತದಾರರಾದ 18-19 ವಯೋಮಾನದವರು ಕ್ಷೇತ್ರದಲ್ಲಿ ಒಟ್ಟು 1,692 ಮತದಾರರಿದ್ದು ಇದರಲ್ಲಿ 905 ಪುರುಷ, 787 ಮಹಿಳೆಯರು ನೋಂದಾಯಿಸಿಕೊಂಡಿದ್ದಾರೆ. ವಿಕಲಚೇತನ ಮತದಾರರು ಒಟ್ಟು 2,544 ಮತದಾರರಿದ್ದು, ಇದರಲ್ಲಿ 1,397 ಪುರುಷರು ಮತ್ತು 1,147 ಮಹಿಳೆಯರಿದ್ದಾರೆ.

ವಿವಿಧ ವಯೋಮಾನದ ಮತದಾರರ ಅಂಕಿ-ಅಂಶಗಳು; ಯುವ ಮತದಾರರು, 18-19ರ ವಯೋಮಾನದ ಒಟ್ಟು 1,692 ಯುವ ಮತದಾರರು ನೋಂದಾಯಿಸಿಕೊಂಡಿದ್ದಾರೆ. ಇದರಲ್ಲಿ 905 ಪುರುಷರು ಮತ್ತು 787 ಮಹಿಳಾ ಮತದಾರರಿದ್ದಾರೆ.20-29ರ ಕ್ಷೇತ್ರದಲ್ಲಿ ಅತಿ ಹೆಚ್ಚು ಮತದಾರರಿರುವ ವಿಭಾಗಗಳಲ್ಲಿ ಇದೂ ಒಂದು. ಒಟ್ಟು 43,616 ಮತದಾರರಿದ್ದು, ಇದರಲ್ಲಿ 21,601 ಪುರುಷರು, 22,002 ಮಹಿಳೆಯರು ಮತ್ತು 13 ತೃತೀಯ ಲಿಂಗಿ ಮತದಾರರಿದ್ದಾರೆ.30-39ರವಯೋಮಾನದಲ್ಲಿ ಒಟ್ಟು 55,814 ಮತದಾರರಿದ್ದಾರೆ. ಇದರಲ್ಲಿ 26,450 ಪುರುಷರು, 29,349 ಮಹಿಳೆಯರು ಮತ್ತು 15 ತೃತೀಯ ಲಿಂಗಿ ಮತದಾರರಿದ್ದಾರೆ.

ಮಧ್ಯವಯಸ್ಕರು: 40-49ರ: ಒಟ್ಟು 55,400 ಮತದಾರರಿದ್ದು, ಇದರಲ್ಲಿ 27,507 ಪುರುಷರು, 27,885 ಮಹಿಳೆಯರು ಮತ್ತು 8 ತೃತೀಯ ಲಿಂಗಿಗಳು ಸೇರಿದ್ದಾರೆ.

50-59ರ ಈ ವಿಭಾಗದಲ್ಲಿ ಒಟ್ಟು 37,167 ಮತದಾರರಿದ್ದಾರೆ 18,917 ಪುರುಷರು, 18,245 ಮಹಿಳೆಯರು ಮತ್ತು 5 ತೃತೀಯ ಲಿಂಗಿಗಳು.ಹಿರಿಯ ನಾಗರಿಕರು: 60-69 ರ‍್ಷ: ಒಟ್ಟು 21,314 ಮತದಾರರಿದ್ದಾರೆ 10,484 ಪುರುಷರು, 10,826 ಮಹಿಳೆಯರು ಮತ್ತು 4 ತೃತೀಯ ಲಿಂಗಿಗಳು. 70-79ರ ಈ ವಯೋಮಾನದ ಒಟ್ಟು 10,870 ಮತದಾರರಿದ್ದಾರೆ. ಇದರಲ್ಲಿ 5,310 ಪುರುಷರು ಮತ್ತು 5,560 ಮಹಿಳಾ ಮತದಾರರಿದ್ದಾರೆ.80ರ ಮೇಲ್ಪಟ್ಟವರು: ಕ್ಷೇತ್ರದಲ್ಲಿ ಒಟ್ಟು 4,734 ಹಿರಿಯ ಮತದಾರರಿದ್ದಾರೆ 2,149 ಪುರುಷರು ಮತ್ತು 2,585 ಮಹಿಳೆಯರು ಇದ್ದಾರೆ.

ಸಭೆಯಲ್ಲಿ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, ಜಿಲ್ಲಾ ಪಂಚಾಯತ್ ಮುಖ್ಯ ಕರ‍್ಯನರ‍್ವಾಹಕ ಅಧಿಕಾರಿ ಗಿತ್ತೆ ಮಾಧವ ವಿಠ್ಠಲರಾವ್, ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ ಹಾಗೂ ವಿವಿಧ ಇಲಾಖೆ ಅಧಿಕಾರಿಗಳು ಹಾಗೂ ವಿವಿಧ ರಾಜಕೀಯ ಪಕ್ಷಗಳ ಮುಖಂಡರು ಉಪಸ್ಥಿತರಿದ್ದರು.

Share This Article
Follow:
ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. ಸುದ್ದಿ, ಮಾಹಿತಿ, ಸಲಹೆ, ಸೂಚನೆ ನೀಡಲು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com
Leave a Comment

Leave a Reply

Your email address will not be published. Required fields are marked *