ದಾವಣಗೆರೆ: ವಿವಿಧ ಇಲಾಖೆ, ಸಂಸ್ಥೆಗಳಲ್ಲಿನ ಖಾಲಿ ಹುದ್ದೆಗಳಿಗೆ ಕರ್ನಾಟಕ ಪರೀಕ್ಷಾ ಪ್ರಾಧಿಕಾರ ವತಿಯಿಂದ ಜ.25 ರಂದು ನಡೆಸಲಾಗುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆ ನಡೆಯಲಿದೆ. ಯಾವುದೇ ಅವ್ಯವಹಾರ ನಡೆಯದಂತೆ ಸುಗುಮವಾಗಿ ಪರೀಕ್ಷೆ ನಡೆಸಲು ಸಕಲ ಸಿದ್ದತೆ ಮಾಡಿಕೊಳ್ಳಲಾಗಿದೆ. ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿ ಗಂಗಾಧರಸ್ವಾಮಿ.ಜಿ.ಎಂ ಅದೇಶಿಸಿದ್ದಾರೆ.
ದಾವಣಗೆರೆ: ಈ ಏರಿಯಾದಲ್ಲಿ ಇಂದು ಬೆ.10ರಿಂದ ಸಂ.4 ಗಂಟೆ ವರೆಗೆ ವಿದ್ಯುತ್ ವ್ಯತ್ಯಯ
ಜಿಲ್ಲಾಧಿಕಾರಿಗಳ ಕಚೇರಿ ಸಭಾಂಗಣದಲ್ಲಿ ಸ್ಪರ್ಧಾತ್ಮಕ ಪರೀಕ್ಷೆ ಕುರಿತು ಪ್ರಾಂಶುಪಾಲರು, ಮೇಲ್ವಿಚಾರಕರು, ವೀಕ್ಷಕರೊಂದಿಗೆ ಚರ್ಚಿಸಲು ಆಯೋಜಿಸಿದ್ದ ಪರೀಕ್ಷೆಯ ಪೂರ್ವಭಾವಿ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಅವರು, ಪರೀಕ್ಷೆ ಸಮಯದಲ್ಲಿ ವಿದ್ಯಾರ್ಥಿಗಳಿಗೆ ಅಗತ್ಯವಾದ ಮೂಲಭೂತ ಸೌಕರ್ಯಗಳನ್ನು ಒದಗಿಸಬೇಕು .ಮತ್ತು ಪರೀಕ್ಷಾ ವೇಳೆಯಲ್ಲಿ ಯಾವುದೇ ಗೊಂದಲಗಳಿಗೆ ಒಳಗಾಗದೇ ಕರ್ತವ್ಯ ನಿರ್ವಹಿಸಬೇಕೆಂದು ತಿಳಿಸಿದರು.
ಈ ನಿಯಮ ಪಾಲನೆ ಕಡ್ಡಾಯ
ಎಲ್ಲಾ ಕೇಂದ್ರಗಳಿಗೆ ನಿಯೋಜಿಸಿರುವ ಅಧಿಕಾರಿಗಳು ಪರೀಕ್ಷೆಗೆ 45 ನಿಮಿಷ ಮುಂಚಿತವಾಗಿ ಬಂದು ಪರೀಕ್ಷಾ ಕೊಠಡಿಯಲ್ಲಿ ವರದಿ ಸಿದ್ದಪಡಿಸಿಕೊಳ್ಳಬೇಕು. ಹಾಗೂ ಪರೀಕ್ಷೆ ನಡೆಯುವ ಕೊಠಡಿಯ ಒಳಗೆ ವಾಚ್, ಕ್ಯಾಲುಕಿಲೇಟರ್, ಬ್ಲೂಟೂತ್ ಸೇರಿದಂತೆ ಯಾವುದೇ ಎಲೆಕ್ಟ್ರಾನಿಕ್ ವಸ್ತುಗಳನ್ನು ತೆಗೆದುಕೊಂಡು ಬರುವಂತಿಲ್ಲ. ಪರೀಕ್ಷೆ ಮುಗಿದ ನಂತರ ಗೈರು ಹಾಜರಾಗಿರುವ ವಿದ್ಯಾರ್ಥಿಗಳ ಮಾಹಿತಿಯನ್ನು ಆನ್‍ಲೈನ್‍ನಲ್ಲಿ ಅಪ್‍ಡೇಟ್ ಮಾಡಿಸಬೇಕು. ಕೊಠಡಿಯಲ್ಲಿ ವಿದ್ಯುತ್ ದೀಪಗಳ ವ್ಯವಸ್ಥೆ, ಶೌಚಾಲಯ ವ್ಯವಸ್ಥೆ ಮಾಡಿಸಬೇಕು ಎಂದರು.
ದಾವಣಗೆರೆ: ಜ.23ರ ಅಡಿಕೆಯ ಕನಿಷ್ಠ, ಗರಿಷ್ಠ ದರ ಎಷ್ಟಿದೆ…?
ದಾವಣಗೆರೆಯ 18 ಕೇಂದ್ರಗಳಲ್ಲಿ ಪರೀಕ್ಷೆ
ಪದವಿಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕ ಪಳನಿವಿಲೋ ದೊರೆಸ್ವಾಮಿ ಮಾತನಾಡಿ, ಜ.25 ರಂದು ನಡೆಯುತ್ತಿರುವ ಸ್ಪರ್ಧಾತ್ಮಕ ಪರೀಕ್ಷೆಯು ನಗರದ 18 ಕೇಂದ್ರಗಳಲ್ಲಿ ನಡೆಸಲಾಗುತ್ತಿದ್ದು, ಎಲ್ಲಾ ಕೇಂದ್ರಗಳಿಗೂ ಮೇಲ್ವಿಚಾರಕರು, ಮತ್ತು ವೀಕ್ಷಕರನ್ನು ನೇಮಿಸಲಾಗಿದೆ.ಬೆಳಿಗ್ಗೆ 10.30 ರಿಂದ 12.30 ರವರೆಗೆ ಪತ್ರಿಕೆ-1 ಮತ್ತು ಮಧ್ಯಾಹ್ನ 2.30 ರಿಂದ 4.30 ರವೆರೆಗೆ ಪತ್ರಿಕೆ-2 ಎರಡು ಹಂತಗಳಲ್ಲಿ ಪರೀಕ್ಷೆ ನಡೆಯಲಿದೆ ಎಂದರು.
ದಾವಣಗೆರೆ: ಶ್ರೀ ನೇತಾಜಿ ಸುಭಾಷ್ ಚಂದ್ರ ಬೋಸ್ ಪ್ರೌಢಶಾಲೆ ಮಾನ್ಯತೆ ರದ್ದು; ಕ್ಷೇತ್ರ ಶಿಕ್ಷಣಾಧಿಕಾರಿ ಆದೇಶ
ಪದವಿ ಪೂರ್ವ ಶಿಕ್ಷಣ ಇಲಾಖೆಯ ಉಪನಿರ್ದೇಶಕರಿಗೆ ಎಲ್ಲ ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರನ್ನೆ ಸಂಪರ್ಕಿಸಿ, ಪ್ರತಿ 24 ಅಭ್ಯರ್ಥಿಗಳಿಗೆ ಒಬ್ಬರು ಕೊಠಡಿ ಮೇಲ್ವಿಚಾರಕರಂತೆ ಅವಶ್ಯವಿರುವಷ್ಟು ಕೊಠಡಿ ಮೇಲ್ವಿಚಾರಕರನ್ನು ನೇಮಿಸಿಕೊಳ್ಳಬೇಕು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳ ವಿವರಗಳನ್ನು ಕ್ಯೂಆರ್ ಕೋಡ್ ಅನ್ನು ಸ್ಕ್ಯಾನ್ ಮೂಲಕ ಪಡೆಯುವ ವ್ಯವಸ್ಥೆ ಹಾಗೂ ಪರೀಕ್ಷಾ ಕೇಂದ್ರಗಳ ಎಲ್ಲಾ ಕೊಠಡಿಗಳಿಗೆ ಜಾಮರ್ ವ್ಯವಸ್ಥೆ ಮಾಡಲಾಗುವುದು. ಪರೀಕ್ಷೆಗೆ ಹಾಜರಾಗುವ ಅಭ್ಯರ್ಥಿಗಳಿಗೆ ವಸ್ತ್ರ ಸಂಹಿತೆಯನ್ನು ನೀಡಲಾಗಿದ್ದು, ಪ್ರಾಧಿಕಾರದ ವೆಬ್‍ಸೈಟಿನಲ್ಲಿ ಪ್ರಕಟಿಸಲಾಗಿದೆ. ಅಭ್ಯರ್ಥಿಗಳನ್ನು ತಪಾಸಣೆ ಮಾಡಲು ಪ್ರತಿ ಕೇಂದ್ರಕ್ಕೆ ಅಗತ್ಯವಿರುವಷ್ಟು ಹೋಮ್‍ಗಾರ್ಡ್‍ಗಳನ್ನು ನಿಯೋಜಿಸಬೇಕು. ತಪಾಸಣೆ ಮಾಡುವ ಸಿಬ್ಬಂದಿಗಳಿಗೆ ಸಹಾಯವಾಗುವಂತೆ ಪ್ರತಿ ಕೇಂದ್ರಕ್ಕೆ ಎರಡು ಹ್ಯಾಂಡ್ ಮೆಟಲ್ ಡಿಟೆಕ್ಟರ್ ಗಳನ್ನು ಒದಗಿಸಲಾಗುವುದು.
ನಿಷೇಧಿತ ಪ್ರದೇಶ
ಕಾಲೇಜಿನ ಪ್ರಾಂಶುಪಾಲರನ್ನು ಆಯಾ ಕಾಲೇಜಿಗೆ ಮೇಲ್ವಿಚಾರಕರನ್ನಾಗಿ ನೇಮಿಸಿದ್ದು, ಕಾಲೇಜಿನಲ್ಲಿ ವಿದ್ಯಾರ್ಥಿಗಳಿಗೆ ಕಾಣುವಂತೆ ಪರೀಕ್ಷಾ ವೇಳಾಪಟ್ಟಿಯನ್ನು ಅಲ್ಲಲ್ಲಿ ಅಳವಡಿಸಿರಬೇಕು. ಪರೀಕ್ಷಾ ಕೊಠಡಿಗಳಲ್ಲಿ ಕಡ್ಡಾಯವಾಗಿ ಗಡಿಯಾರಗಳನ್ನು ಅಳವಡಿಸಬೇಕು. ಪರೀಕ್ಷೆಯಲ್ಲಿ ಅವ್ಯವಹಾರವನ್ನು ತಡೆಯುವ ಸಲುವಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ 200 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಜಿಲ್ಲಾಧಿಕಾರಿಗಳು ಆದೇಶಿಸಿದ್ದು ಮತ್ತು ಸಮೀಪವಿರುವ ಜೆರಾಕ್ಸ್ ಅಂಗಡಿಗಳನ್ನು ಪೊಲೀಸರ ಸಹಾಯದಿಂದ ಮುಚ್ಚಿಸಬೇಕು ಎಂದರು.
ಸಭೆಯಲ್ಲಿ ಅಪರ ಜಿಲ್ಲಾಧಿಕಾರಿ ಶೀಲವಂತ ಶಿವಕುಮಾರ್ ಹಾಗೂ 18 ಪರೀಕ್ಷಾ ಕೇಂದ್ರಗಳ ಪ್ರಾಂಶುಪಾಲರು ಹಾಗೂ ಪರೀಕ್ಷಾ ನಿಯೋಜಿತ ಅಧಿಕಾರಿಗಳು ಉಪಸ್ಥಿತರಿದ್ದರು.



