ದಾವಣಗೆರೆ: ಡಿಸಿಎಂ ಬಡಾವಣೆಯಲ್ಲಿ ಕಾರು ಅಡ್ಡಗಟ್ಟಿ ಹಣ ಸುಲಿಗೆ ಮಾಡುತ್ತಿದ್ದ ಆರೋಪಿಗಳನ್ನು ಕೆಟಿಜೆ ನಗರ ಪೊಲೀಸರ ಕ್ಷಿಪ್ರ ಕಾರ್ಯಚರಣೆ ನಡೆಸಿ ಬಂಧಿಸಿದ್ದಾರೆ. ಆರೋಪಿಗಳಿಂದ ಮೊಬೈಲ್ ಪೋನ್ , ನಗದು ಹಣ ಮತ್ತು ಬೈಕ್ ವಶಕ್ಕೆ ಪಡೆಯಲಾಗಿದೆ.
ದಯಾನಂದ ನಾಗಪ್ಪ ಕಿವಡಣ್ಣನವರ ಎನ್ನುವವರು ಜ.22ರಂದು ಸಂಜೆ ತಮ್ಮ ಕಾರಿನಲ್ಲಿ ಮನೆಗೆ ಹೋಗುತ್ತಿದ್ದಾಗ ಡಿಸಿಎಂ ಸರ್ಕಲ್ ನಲ್ಲಿ ಕಾರನ್ನು ಅಡ್ಡಗಟ್ಟಿದ ಆರೋಪಿಗಳು, ಹೆದರಿಸಿ ಭೀಷ್ಮ ಸರ್ಕಲ್ ಹತ್ತಿರದ ರಸ್ತೆಗೆ ಕರೆದುಕೊಂಡು ಹೋಗಿ ಮೊಬೈಲ್ ಪೋನ್ ಮತ್ತು 2000/- ರೂ ನಗದು ಹಣ ಹಾಗೂ ಕಾರಿನ ಡ್ಯಾಶ್ ಬೋರ್ಡ್ ಕ್ಯಾಮರಾ ಕಿತ್ತುಕೊಂಡು ಹೋಗಿದ್ದರು.
ಸುಲಿಗೆ ಮಾಡಿದ ಆರೋಪಿತರನ್ನು ಪತ್ತೆ ಮಾಡಿ ಕಾನೂನು ಕ್ರಮ ಜರುಗಿಸಿ ಅಂತ ದೂರು ನೀಡಿದ ಮೇರೆಗೆ ಕೆ.ಟಿ.ಜೆ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಳ್ಳಲಾಗಿತ್ತು.
ದಾವಣಗೆರೆ: ಈ ಬಾರಿಯ ಬಜೆಟ್ ನಲ್ಲಿ ಜಿಲ್ಲೆಯ ನೀರಾವರಿಗೆ ಹೆಚ್ಚಿನ ಅನುದಾನ ತರುತ್ತೇವೆ; ಜಿಲ್ಲಾ ಉಸ್ತುವಾರಿ ಸಚಿವ
ಆರೋಪಿ ಹಾಗೂ ಮಾಲು ಪತ್ತೆಗಾಗಿ ಎಸ್ಪಿ ಉಮಾ ಪ್ರಶಾಂತ್, ಎಎಸ್ಪಿ ಪರಮೇಶ್ವರ.ಹೆಚ್., ಡಿವೈಎಸ್ಪಿ ಬಸವೇಶ್ವರ.ಬಿ. ಪೊಲೀಸ್ ಮಾರ್ಗದರ್ಶನದಲ್ಲಿ ಕೆಟಿಜೆ ನಗರ ಠಾಣೆಯ ಪೊಲೀಸ್ ನಿರೀಕ್ಷಕ ಸುನೀಲ್ ಕುಮಾರ್.ಹೆಚ್.ಎಸ್ ನೇತೃತ್ವದಲ್ಲಿ ಆರೋಪಿಗಳನ್ನು ಬಂಧಿಸಲಾಗಿದೆ.
ಆರೋಪಿಗಾಲಾದ ಎ-1 ಭರತ್, 23 ವರ್ಷ, ಹೂವಿನ ವ್ಯಾಪಾರ ವಾಸ-1ನೇ ಮೇನ್ 1ನೇ ಕ್ರಾಸ್, ಹೆಚ್. ಆರ್. ಸರ್ಕಲ್. ದಾವಣಗೆರೆ ಮತ್ತು ಓರ್ವ ಕಾನೂನು ಸಂಘರ್ಷಕ್ಕೊಳಗಾದ ಬಾಲಕನನ್ನು ವಶಕ್ಕೆ ಪಡೆಯಲಾಗಿದೆ. ಸುಲಿಗೆ ಮಾಡಿಕೊಂಡು ಹೋಗಿದ್ದ ವಿವೋ ಮೊಬೈಲ್ ಪೋನ್ 2) 1000/- ರೂ ನಗದು ಹಣ, 3)ಕಾರಿನ ಡ್ಯಾಶ್ ಬೋರ್ಡ್ ಕ್ಯಾಮರಾ ಮತ್ತು ಕೃತ್ಯಕ್ಕೆ ಬಳಸಿದ ಎ1 ಆರೋಪಿತನ ಏಂ-17 ಊಇ-7458 ನೇ ಹೊಂಡಾ ಶೈನ್ ಒಟ್ಟು 98,500/- ರೂ ಬೆಲೆ ಬಾಳುವ ಸ್ವತ್ತನ್ನು ವಶಪಡಿಸಿಕೊಳ್ಳಲಾಗಿದೆ.
ಕಾ.ಸ. ಬಾಲಕನ ವಿರುದ್ದ ದಾವಣಗೆರೆ ಬಡಾವಣೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗ ನ್ಯಾಯಾಲಯದಲ್ಲಿ ವಿಚಾರಣೆಯಲ್ಲಿರುತ್ತದೆ.ಪತ್ತೆ ಕಾರ್ಯದಲ್ಲಿ ಯಶಸ್ವಿಯಾದ ತಂಡಕ್ಕೆ ಎಸ್ಪಿ ಉಮಾಪ್ರಶಾಂತ್ ಶ್ಲಾಘಿಸಿದ್ದಾರೆ.



