ದಾವಣಗೆರೆ: ಮದುವೆಯಾದ ಎರಡೇ ತಿಂಗಳಿಗೆ ಪ್ರಿಯಕರನ ಜೊತೆ ಓಡಿಹೋಗಿ ಪತಿ ಮತ್ತು ಯವತಿ ಸೋದರ ಮಾವನ ಸಾವಿಗೆ ಕಾರಣವಾಗಿದ್ದ ಮಹಿಳೆಯನ್ನು ಪೊಲೀಸರು ಬಂಧನ ಮಾಡಿದ್ದಾರೆ. ಮೃತ ಹರೀಶ್ ಪತ್ನಿ ಸರಸ್ವತಿಯನ್ನು ದಾವಣಗೆರೆ ಬಂಧಿತ ಆರೋಪಿಯಾಗಿದ್ದಾಳೆ.
ದಾವಣಗೆರೆ: ಮದುವೆಯಾಗಿ ಎರಡೇ ತಿಂಗಳಿಗೆ ಓಡಿಹೋದ ಪತ್ನಿ; ಮನನೊಂದು ಪತಿ, ಯುವತಿಯ ಸೋದರ ಮಾವ ಆತ್ಮ*ಹತ್ಯೆ
ದಾವಣಗೆರೆಯ ಎಲೆಬೇತೂರಿನಲ್ಲಿ ಸಂಬಂಧಿಕರ ಮನೆಯಲ್ಲಿದ್ದ ಸರಸ್ವತಿಯನ್ನು ಗ್ರಾಮಾಂತರ ಠಾಣೆಗೆ ಪೊಲೀಸರು ಬಂಧಿಸಿದ್ದಾರೆ. ಸರಸ್ವತಿ ಪ್ರಿಯಕರ ಶಿವಕುಮಾರ್ ಇನ್ನೂ ನಾಪತ್ತೆಯಾಗಿದ್ದು, ಪೊಲೀಸರು ಬಂಧನಕ್ಕೆ ಹುಡುಕಾಟ ನಡೆಸುತ್ತಿದ್ದಾರೆ.
ಪತಿ ಬಿಟ್ಟು ಪರಾರಿ; ಇಬ್ಬರ ಸಾವಿಗೆ ಕಾರಣ
ದಾವಣಗೆರೆಯ ಗುಮ್ಮನೂರು ಗ್ರಾಮದ ಹರೀಶ್ನನ್ನು ಮದುವೆಯಾಗಿದ್ದ ಸರಸ್ವತಿ ಮದುವೆಯಾದ ಎರಡೇ ತಿಂಗಳಿಗೆ ತನ್ನ ಪ್ರಿಯಕರನ ಜೊತೆ ಎಸ್ಕೇಪ್ ಆಗಿದ್ದಳು. ಈ ಘಟನೆಯಿಂದ ತೀವ್ರವಾಗಿ ಮನನೊಂದಿದ್ದ ಪತಿ ಹರೀಶ್, ಜಮೀನಿನಲ್ಲಿ ಮರಕ್ಕೆ ನೇಣು ಬಿಗಿದು ಆತ್ಮಹತ್ಯೆಗೆ ಶರಣಾಗಿದ್ದನು. ಈ ಮದುವೆಯನ್ನು ಮುಂದೆ ನಿಂತು ಮಾಡಿಸಿದ್ದ ಸರಸ್ವತಿಯ ಸೋದರ ಮಾವ ರುದ್ರೇಶ್ ಸಹ ಆತ್ಮಹತ್ಯೆಗೆ ಶರಣಾಗಿದ್ದರು. ಈ ಘಟನೆ ಜಿಲ್ಲೆಯಲ್ಲಿ ಸಂಚಲನ ಸೃಷ್ಠಿಸಿತ್ತು.
ದಾವಣಗೆರೆ: ಅಕ್ರಮ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಗಳ ಬಂಧನ; 80 ಸಾವಿರ ಮೌಲ್ಯದ ಗಾಂಜಾ, ಬೈಕ್ ವಶ
ಇಬ್ಬರ ಸಾವಿಗೆ ಕಾರಣವಾದ ಮಹಿಳೆಯನ್ನು ಪೊಲೀಸರು ಬಂಧಿಸಿದ್ದಾರೆ. ದಾವಣಗೆರೆ ಗ್ರಾಮಾಂತರ ಡಿವೈಎಸ್ಪಿ ಬಸವರಾಜ್ ನೇತೃತ್ವದಲ್ಲಿ ವಿಚಾರಣೆ ನಡೆಯುತ್ತಿದ್ದು, ಪ್ರಾಥಮಿಕ ವಿಚಾರಣೆ ನಂತರ ಮೆಡಿಕಲ್ ಚೆಕ್ ಅಪ್ ಮಾಡಿಸಿ ಬಳಿಕ ಆಕೆಯನ್ನು ನ್ಯಾಯಾಲಯದ ಮುಂದೆ ಹಾಜರುಪಡಿಸಲಿದ್ದಾರೆ.
ದಾವಣಗೆರೆ: ಕಾರು ಅಡ್ಡಗಟ್ಟಿ ಸುಲಿಗೆ ಮಾಡಿದ್ದ ಆರೋಪಿಗಳ ಬಂಧನ
ಪ್ರಿಯಕರ ಎಸ್ಕೇಪ್
ಸರಸ್ವತಿಯನ್ನು ಕಾರಿನಲ್ಲಿ ಕರೆದುಕೊಂಡು ಹೋಗಿದ್ದ ಪ್ರಿಯಕರ ಶಿವಕುಮಾರ್ ನಾಪತ್ತೆಯಾಗಿದ್ದಾನೆ. ಸರಸ್ವತಿ ಶಿವಕುಮಾರ್ ಜೊತೆ ಸೋದರ ಮಾವ ಗಣೇಶ್, ಸರಸ್ವತಿ ಚಿಕ್ಕಮ್ಮ ಅಂಜಿನಮ್ಮ ನಾಪತ್ತೆಯಾಗಿದ್ದು, ನಾಪತ್ತೆಯಾಗಿ ಪೊಲೀಸರು ಬಲೆ ಬೀಸಿದ್ದಾರೆ.
ಪ್ರಿಯಕರ ಶಿವಕುಮಾರ್ ಮೇಲೆ ಎರಡು ಪ್ರತ್ಯೇಕ ಅಟ್ರಾಸಿಟಿ ಪ್ರಕರಣ ದಾಖಲಾಗಿದೆ. ಮೃತ ಹರೀಶ್ ತಂದೆ ಮಹಾರುದ್ರಪ್ಪ ಒಂದು ಅಟ್ರಾಸಿಟಿ ಕೇಸ್, ಮೃತ ರುದ್ರೇಶ್ ಪತ್ನಿ ಪೂರ್ಣಿಮಾ ಇನ್ನೊಂದು ಅಟ್ರಾಸಿಟಿ ಕೇಸ್ ದಾಖಲಾಗಿದೆ. ದಾವಣಗೆರೆ ಗ್ರಾಮಾಂತರ ಠಾಣೆ ಮುಂದೆ ಹರೀಶ್ ಸಂಬಂಧಿಕರು ಜಮಾಯಿಸಿದ್ದಾರೆ. ಹರೀಶ್ ಸಾವಿಗೆ ಕಾರಣರಾದ ಆರೋಪಿಗಳಿಗೆ ಹರೀಶ್ ಡೆತ್ ನೋಟ್ನಲ್ಲಿ ಬರೆದಿರುವಂತೆ ಶಿಕ್ಷೆಯಾಗಬೇಕು ಎಂದು ಒತ್ತಾಯಿಸಿದ್ದಾರೆ.



