Connect with us

Dvgsuddi Kannada | online news portal | Kannada news online

ಸೂರು ಇಲ್ಲದವರಿಗೆ ಸೂರು ಕಲ್ಪಿಸಲು 75 ಎಕೆರೆ ಭೂಸ್ವಾಧೀನ

ದಾವಣಗೆರೆ

ಸೂರು ಇಲ್ಲದವರಿಗೆ ಸೂರು ಕಲ್ಪಿಸಲು 75 ಎಕೆರೆ ಭೂಸ್ವಾಧೀನ

ಡಿವಿಜಿಸುದ್ದಿ.ಕಾಂ ದಾವಣಗೆರೆ: ಸೂರು ಇಲ್ಲದವರಿಗೆ ಸೂರು ಕಲ್ಪಿಸಲು ಸರ್ಕಾರ ದೊಡ್ಡಬಾತಿ ಮತ್ತು ಬೂದಿಹಾಳ್ ಗ್ರಾಮದಲ್ಲಿ 75 ಎಕೆರೆ ಭೂಸ್ವಾಧೀನಕ್ಕೆ ಮುಂದಾಗಿದ್ದು, ಶೀಘ್ರವೇ ಸೂರು ಇಲ್ಲದವರಿಗೆ ನಿವೇಶನ ಹಂಚಿಕೆ ಮಾಡಲಾಗುವುದು ಎಂದು ಸಂಸದ ಜಿ.ಎಂ. ಸಿದ್ದೇಶ್ವರ ಹೇಳಿದರು.

ದಾವಣಗೆರೆ ಜಿಲ್ಲಾಧಿಕಾರಿ ಕಚೇರಿಯಲ್ಲಿ  ನಗರಾಭಿವೃದ್ಧಿಯ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ದಾವಣಗೆರೆ ಮಹಾನಗರ ಪಾಲಿಕೆಯಲ್ಲಿ ವಿವಿಧ ವಸತಿ ಯೋಜನೆಯಡಿ ೨೪ ಸಾವಿರ ಅರ್ಜಿಗಳು ಬಂದಿವೆ. ಇವರಿಗೆ ನಿವೇಶನ ಕಲ್ಪಿಸಲು ದೊಡ್ಡಬಾತಿ ಮತ್ತು ಬೂದಿಹಾಳ್ ಗ್ರಾಮದಲ್ಲಿ ಭೂಸ್ವಾಧೀನ ಪ್ರಕ್ರಿಯೆ ಮುಗಿದ ನಂತರ ಅರ್ಹ ಅರ್ಜಿದಾರಿಗೆ ನಿವೇಶನ ಹಂಚಲಾಗುವುದು ಎಂದರು.

 

ಪಾಲಿಕೆಗೆ ಬಂದಿರುವ ೨೪ ಸಾವಿರ ಅರ್ಜಿಯಲ್ಲಿ ಕೂಡಲೇ ಅರ್ಹ ಫಲಾನುಭವಿಗಳನ್ನು ಗುರುತಿಸಿ. ಮನೆ ಇರುವವರನ್ನು ಗುರುತಿಸಿ ಅಂತಹ ಅರ್ಜಿಗಳನ್ನು ತಿರಸ್ಕರಿಸಿ. ವಸತಿ ಇಲ್ಲದವರಿಗೆ ವಸತಿ ಕಲ್ಪಿಸಿ ಎಂದು ಸಂಸದ ಜಿ.ಎಂ ಸಿದ್ದೇಶ್ವರ ಅಧಿಕಾರಿಗಳಿಗೆ ತಾಕೀತು ಮಾಡಿದರು.

ಈ ಸಂದರ್ಭದಲ್ಲಿ ಶಾಸಕ ಎಸ್.ಎ. ರವೀಂದ್ರನಾಥ್, ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ, ಮಹಾನಗರ ಪಾಲಿಕೆ ಆಯುಕ್ತ ಮಂಜುನಾಥ್ ಬಳ್ಳಾರಿ ಸೇರಿದಂತೆ ವಿವಿಧ ಇಲಾಖೆ ಅಧಿಕಾರಿಗಳು ಭಾಗಿಯಾಗಿದ್ದರು.

ಸುದ್ದಿ, ಜಾಹೀರಾತಿಗಾಗಿ ವಾಟ್ಸ್ ಅಪ್ ಮಾಡಿ: 98444603336, 7483892205

 

 

ಲೋಕಲ್ ಸುದ್ದಿಗಳನ್ನು ಕ್ಷಣಾರ್ಧದಲ್ಲಿ ಲೋಕದ ಜನರ ಬೆರಳ ತುದಿಗೆ ತಲುಪಿಸುವ ಉದ್ದೇಶದಿಂದ ಡಿವಿಜಿಸುದ್ದಿ.ಕಾಂ ಕನ್ನಡ ಆನ್ ಲೈನ್ ನ್ಯೂಸ್ ಪೋರ್ಟಲ್ (ಡಿಜಿಟಲ್ ಮಾಧ್ಯಮ) ಸ್ಥಾಪಿಸಲಾಗಿದೆ. ಡಿಜಿಟಲ್ ಮಾಧ್ಯಮ ಅತೀ ವೇಗವಾಗಿ ಜನರನ್ನು ತಲುಪುವ ನ್ಯೂ ಮೀಡಿಯಾ. ಡಿವಿಜಿಸುದ್ದಿ‌.ಕಾಂ ಸ್ಥಳೀಯ ಸುದ್ದಿ ಜೊತೆ ಇನ್ಫೋರ್ಮೆಟಿವ್ ನ್ಯೂಸ್ ಕೊಡುವುದು ಮೊದಲ ಆದ್ಯತೆ. ಇದಲ್ಲದೆ ರಾಜಕೀಯ, ಶಿಕ್ಷಣ, ಉದ್ಯೋಗ, ಕ್ರೀಡೆ, ಅಪರಾಧ ಸುದ್ದಿ ಹಾಗೂ ವಿಶೇಷವಾಗಿ ಕೃಷಿ ಮತ್ತು ರೈತರಿಗೆ ಉಪಯುಕ್ತ ಮಾಹಿತಿ ನೀಡುವುದು ಮುಖ್ಯ ಉದ್ದೇಶ. 10 ವರ್ಷದ ಅನುಭವದೊಂದಿಗೆ ಹೊಸತನಕ್ಕೆ ಕೈ ಹಾಕಿದ್ದೇವೆ. ಉಪಯುಕ್ತ ಮಾಹಿತಿ, ಸಲಹೆ, ಸೂಚನೆ ನೀಡುವವರು ವಾಟ್ಸಾಪ್ (7483892205) ಮಾಡಿ... Editor: munikondajji, MA journalism, contact number:7483892205, e-mail: dvgsuddi@gmail.com

Click to comment

Leave a Reply

Your email address will not be published. Required fields are marked *

More in ದಾವಣಗೆರೆ

To Top