ಡಿವಿಜಿ ಸುದ್ದಿ, ಬೆಂಗಳೂರು: ಇಡೀ ಜಗತ್ತಿನಲ್ಲಿ ತಲ್ಲಣ ಸೃಷ್ಠಿಸಿರುವ ಕೊರೊನಾ ವೈರಸ್ ರಾಜ್ಯದಲ್ಲಿ 5 ಜನರಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ ಎಂದು ಆರೋಗ್ಯ ಸಚಿವ ಶ್ರೀ ರಾಮುಲು ತಿಳಿಸಿದ್ದಾರೆ.
ಕಲಬುರಗಿಯಲ್ಲಿ ಕೊರೊನಾ ವೈರಸ್ ಗೆ ವೃದ್ಧ ಬಲಿಯಾದ ಕುರಿತು ಸದನದಲ್ಲಿ ನಡೆದ ಚರ್ಚೆ ವೇಳೆ ಮಾತನಾಡಿದ ಅವರು, ಕೊರೊನಾ ವೈರಸ್ ತಗುಲಿದ ವೃದ್ಧನನ್ನು ಕೇಂದ್ರ ಸರ್ಕಾರದ ಆರೋಗ್ಯ ಇಲಾಖೆ ಮಾರ್ಗದರ್ಶನ ಪ್ರಕಾರ ಅಂತ್ಯಕ್ರಿಯೆ ನಡೆಸಲಾಗಿದೆ. ಅಂತ್ಯಕ್ರಿಯೆಗೆ ಅಗತ್ಯವಾದ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಇನ್ನು ವೃದ್ಧನ ಜೊತೆ ಇದ್ದ ಕುಟುಂಬದ 7 ಜನರು ಹಾಗೂ ಅವರ ಸುತ್ತಮುತ್ತ ಇದ್ದ 25 ಜನರನ್ನು ಐಸೋಲೆಟ್ ವಾರ್ಡ್ ನಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ರಾಜ್ಯದಲ್ಲಿ ಇದುವರೆಗೆ 5 ಜನರಲ್ಲಿ ಪಾಸಿಟಿವ್ ರಿಪೋರ್ಟ್ ಬಂದಿದೆ ಎಂದರು.
ಕೊರೊನಾ ವೈರಸ್ ಜಾಗೃತಿಗೆ ಆರೋಗ್ಯ ಇಲಾಖೆ ಎಲ್ಲಾ ರೀತಿಯ ಮುಂಜಾಗ್ರತ ಕ್ರಮ ಕೈಗೊಳ್ಳಲಾಗಿದೆ. ಆರೋಗ್ಯ ಇಲಾಖೆಯಿಂದ ಪ್ರತಿ 2 ಗಂಟೆಗೊಮ್ಮ ಮಾಧ್ಯಮಗಳಿಗೆ ಹೆಲ್ತ್ ಬುಲೆಟಿನ್ ಬಿಡುಗಡೆ ಮಾಡಲಾಗುತ್ತಿದೆ. ವಿದೇಶದಿಂದ ಬರುವರನ್ನು ವಿಮಾನ ನಿಲ್ದಾಣದಲ್ಲಿ ತಪಾಸಣೆ ಒಳಪಡಿಸಲಾಗುತ್ತಿದೆ. ಈಗಾಗಲೇ 1.20 ಲಕ್ಷ ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ ಎಂದರು.
ಇದೊಂದು ಮಾರಕ ರೋಗವಾಗಿದ್ದು, ಎಲ್ಲರೂ ಈ ಬಗ್ಗೆ ಜಾಗೃತಿ ಮೂಡಿಸಬೇಕಿದೆ. ಈ ಬಗ್ಗೆ ವಿರೋಧ ಪಕ್ಷಗಳು ಅಗತ್ಯವಾದ ಸಲಹೆ ನೀಡಬೇಕಿದೆ . ಇನ್ನು ಮಾಸ್ಕ್, ಔಷಧಿಗಳನ್ನು ದುಪ್ಪಟ್ಟು ಬೆಲೆಗೆ ಮಾರಾಟ ಮಾಡುವರ ವಿರುದ್ಧ ದೂರು ನೀಡಿದರೆ, ಅಂತಹ ಔಷಧಿ ಅಂಗಡಿಗಳ ಲೆಸೆನ್ಸ್ ರದ್ದು ಮಾಡಲಾಗುವುದು. ಈಗಾಗಲೇ ನಿಮ್ಹಾನ್ಸ, ಶಿವಮೊಗ್ಗ, ಬಳ್ಳಾರಿ ಯಲ್ಲಿ ಕೊರೊನಾ ಚಿಕಿತ್ಸೆ ಕೇಂದ್ರ ತೆರೆಯಲಾಗಿದೆ. ಮುಂದೆ ಹುಬ್ಬಳ್ಳಿ, ರಾಯಚೂರು, ಕಲಬುರಗಿಯಲ್ಲಿ ಕೇಂದ್ರ ತೆರೆಯಲು ಕ್ರಮ ಕೈಗೊಳ್ಳಲಾಗುವುದು. ಪ್ರತಿ ಜಿಲ್ಲಾ ಆಸ್ಪತ್ರೆಯಲ್ಲಿ 10 ಬೆಡ್ ಗಳನ್ನು ಕೊರೊನಾ ಚಿಕಿತ್ಸೆಗೆ ಮೀಸಲಿಡಲಾಗಿದೆ ಎಂದರು.



