ಡಿವಿಜಿ ಸುದ್ದಿ, ದಾವಣಗೆರೆ: ದಾವಣಗೆರೆ ಮಹಾನಗರ ಪಾಲಿಕೆ ಪೌರ ಕಾರ್ಮಿಕರ ಸಂಘ ಹಾಗೂ ನೇರ ಪಾವತಿ ಪೌರಕಾರ್ಮಿಕರ ಸಂಘ ವತಿಯಿಂದ ಇಂದು ದಾವಣಗೆರೆ ಮಹಾನಗರ ಪಾಲಿಕೆ ಆವರಣದಲ್ಲಿ ಮೇಯರ್ ಅಜಯ್ ಕುಮಾರ್ , ಆಯುಕ್ತರು ವಿಶ್ವನಾಥ್ ಮುದ್ದಜ್ಜಿ ಅವರಿಗೆ ಅನೇಕ ವರ್ಷಗಳಿಂದ ನನೆಗುದ್ದಿಗೆ ಬಿದ್ದಿದ್ದ ಪೌರ ಕಾರ್ಮಿಕರ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಒತ್ತಾಯಿಸಿ ಮನವಿ ಸಲ್ಲಿಸಲಾಯಿತು.

ಅದಷ್ಟು ಬೇಗನೆ ಪೌರ ಕಾರ್ಮಿಕರ ನ್ಯಾಯಯುತವಾದ ಬೇಡಿಕೆಗಳನ್ನು ಈಡೇರಿಸದೆ ಹೋದರೆ ಮುಂದಿನ ದಿನದಲ್ಲಿ ಮಹಾನಗರ ಪಾಲಿಕೆ ಆವರಣದಲ್ಲಿ ಪೌರ ಕಾರ್ಮಿಕರು ಸ್ವಚ್ಛತೆ ಕೆಲಸವನ್ನು ಸ್ಥಗಿತಗೊಳಿಸಿ ಧರಣಿ ಸತ್ಯಾಗ್ರಹವನ್ನು ನಡೆಸಲಾಗುವುದು ಎಚ್ಚರಿಕೆ ನೀಡಿದರು.
ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯ ಪೌರಕಾರ್ಮಿಕರ ಸಂಘದ ರಾಜ್ಯ ಉಪಾಧ್ಯಕ್ಷ ಎಲ್.ಎಂ.ಹನುಮಂತಪ್ಪ ಹಾಗೂ ಸಂಘದ ಕಾರ್ಯದರ್ಶಿ ಎನ್.ನೀಲಗಿರಿಯಪ್ಪ ಪ್ರಧಾನ ಕಾರ್ಯದರ್ಶಿ ಬಿ ಲೋಹಿತ್ ಕುಮಾರ್ ಸಂಘದ ಉಪಾಧ್ಯಕ್ಷ ಸಾಗರ್ ಎಲ್.ಹೆಚ್, ಕಾರ್ಯದರ್ಶಿ ಉಮೇಶ್.ಎಂ, ರವಿವರ್ಧನ್.ಎಚ್, ಚಂದ್ರಶೇಖರ್.ಕೆ.ವಿ, ಮೂರ್ತಿ. ಆರ್, ಲಲಿತಮ್ಮ ವೆಂಕಟೇಶ್ ವಾಸು ಸೇರಿದಂತೆ ಮತ್ತಿತರರು ಉಪಸ್ಥಿತರಿದ್ದರು.



