ಡಿವಿಜಿ ಸುದ್ದಿ,ಬೆಂಗಳೂರು: ಡೆಡ್ಲಿ ಕೊರೊನಾ ಭೀತಿ ರಾಜ್ಯದಲ್ಲಿ ದಿನದಿಂದ ದಿನಕ್ಕೆ ಹೆಚ್ಚುತ್ತಲೇ ಇದೆ. ಇಡೀ ದೇಶದಲ್ಲಿಯೇ ಮೊದಲ ಬಲಿ ಪಡೆದ ಕರ್ನಾಟಕದಲ್ಲಿ, ಇದೀಗ ಸೋಂಕು ತಗುಲಿತರ ಸಂಖ್ಯೆ 13ಕ್ಕೆ ಏರಿಕೆಯಾಗಿದೆ.
ಬೆಂಗಳೂರಿನಲ್ಲಿ ಮತ್ತಿಬ್ಬರಿಗೆ #COVID19 ಸೋಂಕು ದೃಢಪಟ್ಟಿದೆ. ಒಬ್ಬರು 56 ವಯಸ್ಸು, USA ಪ್ರವಾಸದಿಂದ ಮಾರ್ಚ್ 6ರಂದು ಹಿಂದಿರುಗಿದ್ದರು. ಇನ್ನೊಬ್ಬರು 25 ವರ್ಷದ ಮಹಿಳೆಯು, ಸ್ಪೇನ್ ಪ್ರವಾಸದಿಂದ ಹಿಂದಿರುಗಿದ್ದು, ಇಬ್ಬರನ್ನು ಈಗಾಗಲೇ ಪ್ರತ್ಯೇಕಿಸಲ್ಪಟ್ಟ ಆಸ್ಪತ್ರೆಯಲ್ಲಿ ಚಿಕಿತ್ಸೆಗೆ ಒಳಪಡಿಸಲಾಗಿದೆ.
— B Sriramulu (@sriramulubjp) March 18, 2020
ರಾಜ್ಯದಲ್ಲಿ ಇಂದು ಮತ್ತಿಬ್ಬರಿಗೆ ಕೊರೊನಾ ಸೋಂಕು ತಗಲಿರುವುದು ಧೃಡಪಟ್ಟಿದೆ ಎಂದು ಆರೋಗ್ಯ ಸಚಿವ ಶ್ರೀರಾಮುಲು ಟ್ವೀಟ್ ಮಾಡಿದ್ದಾರೆ. ಈ ಮೂಲಕ ರಾಜ್ಯದಲ್ಲಿ ಕರೊನಾ ಸೋಂಕಿತರ ಸಂಖ್ಯೆ 13 ಕ್ಕೆ ಏರಿಕೆಯಾಗಿದೆ. ಇನ್ನೊಂದೆಡೆ ರಾಜ್ಯದಲ್ಲಿ ಹಕ್ಕಿ ಜ್ವರ, ಮಂಗನ ಕಾಯಿಲೆ, ಕೊರೊನಾ ಭೀತಿ ಹೆಚ್ಚಿರುವ ಹಿನ್ನೆಲೆಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನ ಸೌಧದಲ್ಲಿ ತುರ್ತು ಸಭೆ ಕರೆಯಲಾಗಿದೆ.
56 ವರ್ಷದ ವ್ಯಕ್ತಿ ಅಮೆರಿಕಾದಿಂದ ಬೆಂಗಳೂರಿಗೆ ಮಾರ್ಚ್ 6 ರಂದು ಬಂದಿದ್ದು,ಅವರಲ್ಲಿ ಸೋಂಕು ಧೃಡಪಟ್ಟಿದೆ. ಇನ್ನೊಬ್ಬ ಮಹಿಳೆ ಸ್ಪೇನ್ ದೇಶದಿಂದ ಬಂದಿದ್ದರು. ಈ ಇಬ್ಬರಲ್ಲಿಯೂ ಕೊರೊನಾ ಸೋಂಕು ತಗಲಿರುವುದು ಸಾಬೀತಾಗಿದೆ. ಹೀಗಾಗಿ ಪ್ರತ್ಯೇಕವಾಗಿ ಇರಿಸಿ ಚಿಕಿತ್ಸೆ ನೀಡಲಾಗುತ್ತಿದೆ ಎಂದು ಶ್ರೀರಾಮುಲು ತಿಳಿಸಿದ್ದಾರೆ.
ಹಾಗೂ ಇವರೊಂದಿಗೆ ಸಂಪರ್ಕ ಹೊಂದಿದವರನ್ನು ಪತ್ತೆ ಮಾಡಲಾಗಿ, ಅವರೆಲ್ಲರನ್ನೂ ಕಡ್ಡಾಯವಾಗಿ ಅವರ ಮನೆಯಲ್ಲಿ ಪ್ರತ್ಯೇಕವಾಗಿರಿಸಲಾಗಿದೆ. ಎಲ್ಲಾ ಅಂತರರಾಷ್ಟ್ರೀಯ ಪ್ರಯಾಣಿಕರನ್ನು ತಪಾಸಣೆ ಮಾಡುವ ಕಾರ್ಯ ನಿರಂತರ ಪ್ರಗತಿಯಲ್ಲಿದೆ.
— B Sriramulu (@sriramulubjp) March 18, 2020



