ಡಿವಿಜಿ ಸುದ್ದಿ, ಕಲಬುರಗಿ: ಕೊರೊನಾ ಸೋಂಕು ಇಡೀ ದೇಶವೇ ತತ್ತರಿಸಿ ಹೋಗಿದೆ. ದೇಶದಲ್ಲಿಯೇ ಮೊದಲ ಬಲಿ ಪಡೆದ ಕಲಬುರಗಿಯಲ್ಲಿ ಕೊರೊನಾ ಭೀತಿ ಇನ್ನಷ್ಟು ಹೆಚ್ಚಿದೆ. ಈ ಹಿನ್ನೆಲೆಯಲ್ಲಿ ಖಾಸಗಿ ಬಸ್ ಸೇವೆಯನ್ನು ಇಂದಿನನಿಂದಲ್ಲೇ ಸಂಪೂರ್ಣವಾಗಿ ಬಂದ್ ಮಾಡುವಂತೆ ಜಿಲ್ಲಾಧಿಕಾರಿ ಬಿ. ಶರತ್ ಸೂಚನೆ ನೀಡಿದ್ದಾರೆ.
ಮಹಾರಾಷ್ಟ್ರ, ತೆಲಂಗಾಣ, ಆಂಧ್ರಪ್ರದೇಶಕ್ಕೆ ತೆರಳುವ ಬಸ್ ಗಳ ಮೂಲಕ ಕೊರೊನಾ ಸೋಂಕು ಹರಡುವ ಸಾಧ್ಯತೆ ಇದೆ. ಈ ಹಿನ್ನೆಲೆ ಖಾಸಗಿ ಬಸ್ ಸೇವೆಯನ್ನು ಸಂಪೂರ್ಣವಾಗಿ ಬಂದ್ ಮಾಡಲಾಗಿದೆ. ಸರ್ಕಾರದ ಮುಂದಿನ ಆದೇಶ ಬರುವವರೆಗೂ ಜಿಲ್ಲೆಯಿಂದ ಯಾವುದೇ ಖಾಸಗಿ ಬಸ್ ಸೇವೆ ಇರುವುದಿಲ್ಲ ಎಂದು ಜಿಲ್ಲಾಧಿಕಾರಿಗಳು ಖಾಸಗಿ ಬಸ್ ಮಾಲೀಕರ ಸಭೆ ಬಳಿಕ ತಿಳಿಸಿದರು.
ಈಗಾಗಲೇ ಬಕ್ಕಿಂಗ್ ಮಾಡಿದವರಿಗೆ ಹಣ ವಾಪಸ್ಸು ನೀಡುವಂತೆ ಸೂಚಿಸಲಾಗಿದೆ. ಸರ್ಕಾರಿ ಬಸ್ ಸೇವೆ ಹೊರತುಪಡಿಸಿ ಎಲ್ಲಾ ಖಾಸಗಿ ಬಸ್ ಸೇವೆಯನ್ನು ರದ್ದುಗೊಳಿಸಲಾಗಿದೆ. ಈ ಮೂಲಕ ಕಲಬುರಗಿ ಸಂಪೂರ್ಣವಾಗಿ ಬಂದ್ ಆಗಲಿದೆ.



