ಡಿವಿಜಿ ಸುದ್ದಿ, ಬೆಂಗಳೂರು : ರಾಜ್ಯದಲ್ಲಿ ದಿನದಿಂದ ದಿನಕ್ಕೆ ಕೊರೊನಾ ಸೋಂಕಿತರ ಸಂಖ್ಯೆ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಮಾ.31 ವರೆಗೆ ರಾಜ್ಯ ಬಂದ್ ಮುಂದುವರಿಯಲಿದೆ ಎಂದು ವೈದ್ಯಕೀಯ ಶಿಕ್ಷಣ ಸಚಿವ ಡಾ. ಕೆ. ಸುಧಾಕರ್ ತಿಳಿಸಿದರು.
ವಿಧಾನಸಭಾ ಕಲಾಪದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಈವರೆಗೆ 14 ಜನರಲ್ಲಿ ಕೊರೊನಾ ವೈರಸ್ ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ಮಾ. 31 ವರೆಗೆ ರಾಜ್ಯ ಬಂದ್ ಮುಂದುವರಿಯಲಿದೆ.
ರಾಜ್ಯ ಸರ್ಕಾರ ಹಿಂದಿನ ಮಾರ್ಗ ಸೂಚಿ ಮಾ. 31 ವೆರೆಗೆ ಮುಂದುವರಿಯಲಿದೆ. ಅಗತ್ಯ ವಸ್ತುಗಳನ್ನು ಹೊರತು ಪಡಿಸಿ ಎಲ್ಲಾ ಮಾಲ್, ಮಂದಿರ ಸೇರಿದಂತೆ ಜನ ನಿಬೀಡ ಪ್ರದೇಶದಲ್ಲಿನಿಷೇಧ ಮುಂದುವರಿಯಲಿದೆ ಎಂದು ತಿಳಿಸಿದರು.



