ಡಿವಿಜಿಸುದ್ದಿ.ಕಾಂ, ದಾವಣಗೆರೆ: ಮುಂದಿನ ತಿಂಗಳು 13 ರಂದು ಜಿಲ್ಲಾ ಮಟ್ಟದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಹಿನ್ನೆಲೆ, ಈ ಬಗ್ಗೆ ಚರ್ಚಿಸಲು ಸೆ.19 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಪೂರ್ವಭಾವಿ ಸಿದ್ದತಾ ಸಭೆಯನ್ನು ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಆಯೋಜಿಸಿದೆ. ಈ ಸಭೆಗೆ ಸಮಾಜದ ಮುಖಮಡರು, ಅಧಿಕಾರಿ ವರ್ಗದವರು ಆಗಮಿಸಿ, ತಮ್ಮ ಸೂಕ್ತ ಸಲಹೆ ಸಹಕಾರ ನೀಡುವಂತೆ ಜಿಲ್ಲಾ ಪರಿಶಿಷ್ಟ ವರ್ಗಗಳ ಕಲ್ಯಾಣಾಧಿಕಾರಿಗಳು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



