ಡಿವಿಜಿ ಸುದ್ದಿ, ದಾವಣಗೆರೆ: ಇಡೀ ಜಗತ್ತಿನಲ್ಲಿ ಸಂಚಲನ ಮೂಡಿಸಿದ ಕೊರೊನಾ ವೈರಸ್ ಜಿಲ್ಲೆಯಲ್ಲಿ ಹರಡದಂತೆ ಮುಂಜಾಗ್ರತಾ ಕ್ರಮ ಕೈಗೊಂಡಿದ್ದು, ಜಿಲ್ಲೆಯಲ್ಲಿ ಇಲ್ಲಿವರೆಗೆ 2,178 ಜನರನ್ನು ತಪಾಸಣೆಗೆ ಒಳಪಡಿಸಲಾಗಿದೆ. ಯಾರಲ್ಲೂ ಪಾಸಿಟಿವ್ ವರದಿ ಬಂದಿಲ್ಲ ಎಂದು ಜಿಲ್ಲಾಧಿಕಾರಿ ಮಹಾಂತೇಶ್ ಬೀಳಗಿ ತಿಳಿಸಿದ್ದಾರೆ.
ಮಾರ್ಚ್ 04 ರಿಂದ ಇಲ್ಲಿಯವರೆಗೆಒಟ್ಟು 2, 1 78 ಜನರನ್ನು ತಪಾಸಣೆ ನಡೆಸಲಾಗಿದೆ. 28 ದಿನಗಳ ಅವಲೋಕನ ಅವಧಿಯನ್ನು ಪೂರ್ಣಗೊಳಿಸಿದವರು ಒಬ್ಬರು ಪೂರೈಸಿದ್ದು, 14 ದಿನಗಳ ಅವಲೋಕನ ಅವಧಿಯನ್ನು 14 ಪೂರೈಸಿದ್ದಾರೆ. 2,168 ಜನರನ್ನು ಮನೆಯಲ್ಲೇ ಪ್ರತ್ಯೇಕವಾಗಿ ಇರಿಸಲಾಗಿದೆ. ಆಸ್ಪತ್ರೆಗಳಲ್ಲಿ ಇಬ್ಬರನ್ನು ಪ್ರತ್ಯೇಕವಾಗಿ ಇರಿಸಲಾಗಿದೆ. ಯಾರಲ್ಲೂ ಸೋಂಕಿನ ಪಾಸಿಟಿವ್ ವರದಿ ಬಂದಿಲ್ಲ ಎಂದು ತಿಳಿಸಿದ್ದಾರೆ.
ಮಾರ್ಚ್ 04 ರಿಂದ ಇದುವರೆಗೆ 78 ಜನರು ಜಿಲ್ಲೆಯಿಂದ ವಿದೇಶ ಪ್ರಯಾಣ ಮಾಡಿ ಬಂದಿದ್ದು,ಇದುವರೆಗೆ ಯಾವುದೇ ಖಚಿತಪಟ್ಟ ಪ್ರಕರಣವಾಗಿಲ್ಲ ಎಂದಿದ್ದಾರೆ.



