ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್‍ನಿಂದಾಗಿ ಸಂಭವಿಸಬಹುದಾದ ಅನಾಹುತಗಳನ್ನು ತಡೆಗಟ್ಟಲು ಒಂದು ವಾರ ಮಾ.18 ರಿಂದ 24 ರವರೆಗೆ ಹಲವು ಮುಂಜಾಗ್ರತಾ ಕ್ರಮಗಳನ್ನು ತೆಗೆದುಕೊಳ್ಳಲು ಜಿಲ್ಲೆಯಾದ್ಯಮತೆ 144 ಸೆಕ್ಷನ್ ಜಾರಿ ಮಾಡಿ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ ಆದೇಶಿಸಿದ್ದಾರೆ.
ಸಾರ್ವಜನಿಕರು ಹೆಚ್ಚಾಗಿ ಸೇರುವಂತಹ ಸಂತೆ, ಜಾತ್ರೆ, ಸಮಾವೇಶ, ಸಮ್ಮೇಳನ, ಮದುವೆ, ಕ್ರೀಡಾ ಕೂಟ ಹಾಗೂ ಧಾರ್ಮಿಕ ಸಮಾರಂಭಗಳಲ್ಲಿ ಕೊರೊನಾ ವೈರಸ್ ಸೋಂಕು ಒಬ್ಬರಿಂದ ಒಬ್ಬರಿಗೆ ಹರಡುವಂತಹ ಸಾಧ್ಯತೆಗಳಿದ್ದು, ಇಂತಹ ಸಂದರ್ಭಗಳಲ್ಲಿ ಕೊರೊನಾ ವೈರಸ್ ಸೋಂಕು ಹರಡದಂತೆ ಸಾರ್ವಜನಿಕ ಹಿತದೃಷ್ಟಿಯಿಂದ ಪರಿಣಾಮಕಾರಿಯಾಗಿ ಸೂಕ್ತ ಮುಂಜಾಗ್ರತಾ ಕ್ರಮವಾಗಿ ಸೆಕ್ಷನ್ 144 ಜಾರಿ ತರಲಾಗಿದೆ.ಮಾ.18 ರಿಂದ 24 ರವರೆಗೆ ಜಿಲ್ಲೆಯಾದ್ಯಮತ 5 ಕ್ಕಿಂತ ಹೆಚ್ಚು ಜನರು ಗುಂಪು ಸೇರುವುದನ್ನು ನಿಷೇಧಿಸಿದೆ.
ಈ ಆದೇಶವು ಅಂತ್ಯಕ್ರಿಯೆ, ಮೆರವಣಿಗೆ ಮತ್ತು ಪರೀಕ್ಷೆಯಲ್ಲಿ ಪಾಲ್ಗೊಳ್ಳುವ ವಿದ್ಯಾರ್ಥಿಗಳಿಗೆ ಅನ್ವಯಿಸುವುದಿಲ್ಲ.



