ಡಿವಿಜಿ ಸುದ್ದಿ, ಬೆಂಗಳೂರು: ಕೊರೊನಾ ವೈರಸ್ ತಡೆಯಲು ಸಾರ್ವಜನಿಕರು ಸಹಕರಿಸಬೇಕು ಎಂದಿರುವ ಮುಖ್ಯಮಂತ್ರಿ ಬಿ.ಎಸ್ ಯಡಿಯೂರಪ್ಪ ಅವರು, ಕೊರೊನಾ ನಿರ್ವಹಣೆಗೆ ತಮ್ಮ ಒಂದು ವರ್ಷದ ವೇತನವನ್ನು ದೇಣಿಗೆಯಾಗಿ ನೀಡಿದ್ದಾರೆ.
#ಕೊರೊನ ಸೋಂಕು ವಿರುದ್ಧದ ಹೋರಾಟಕ್ಕೆ ನನ್ನ ಒಂದು ವರ್ಷದ ಸಂಬಳವನ್ನು 'ಮುಖ್ಯಮಂತ್ರಿಗಳ ಪರಿಹಾರ ನಿಧಿ ಕೋವಿಡ್-19' ಕ್ಕೆ ನೀಡುತ್ತಿದ್ದೇನೆ. ಸಚಿವರು, ಶಾಸಕರು, ಸಂಸದರು, ಅಧಿಕಾರಿಗಳು ಹಾಗೂ ಸಾರ್ವಜನಿಕರು ತಮ್ಮ ಕೈಲಾದ ಮಟ್ಟಿಗೆ ದೇಣಿಗೆ ನೀಡಿ ಈ ಹೋರಾಟಕ್ಕೆ ಬಲ ತುಂಬಬೇಕು ಎಂದು ಮನವಿ ಮಾಡುತ್ತೇನೆ.@BSYBJP #DonatetoCMRFCovid19 pic.twitter.com/GXuzVTuaua
— CM of Karnataka (@CMofKarnataka) April 1, 2020
ಈ ಬಗ್ಗೆ ಪ್ರಕಟಣೆ ಹೊರಡಿಸಿರುವ ಸಿಎಂ, ಕೋವಿಡ್-19 ನಿರ್ವಹಣೆಗೆ ಒಂದು ವರ್ಷದ ವೇತನವನ್ನು ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ನೀಡಿರುವುದಾಗಿ ತಿಳಿಸಿದ್ದಾರೆ. ಒಂದು ವರ್ಷದ ಸುಮಾರು 24 ಲಕ್ಷ ರೂ. ವೇತನವನ್ನು ಪರಿಹಾರ ನಿಧಿಗೆ ಸಿಎಂ ದೇಣಿಗೆ ನೀಡಿದ್ದಾರೆ. ಅಲ್ಲದೆ ಶಾಸಕರು, ಸಂಸದರು ಹಾಗೂ ಅಧಿಕಾರಿಗಳಿಗೂ ಕೂಡ ತಮ್ಮ ಕೈಲಾದ ದೇಣಿಗೆ ಕೊಡುವಂತೆ ಸಿಎಂ ಕರೆ ಕೊಟ್ಟಿದ್ದಾರೆ
ಇನ್ನು 14 ದಿನಗಳ ಕಾಲ ಲಾಕ್ ಡೌನ್ ನಿಯಮ ಪಾಲನೆ ಮಾಡುವುದು ಕಡ್ಡಾಯವಾಗಿದೆ. ಯಾರೂ ಮನೆಯಿಂದ ಹೊರಬರದೇ ಕೊರೊನಾ ವೈರಸ್ ತಡೆಯಬೇಕು ಎಂದು ಸಿಎಂ ಮನವಿ ಮಾಡಿದ್ದಾರೆ. ರಾಜ್ಯವು ಸೋಂಕಿತರ ಸಂಖ್ಯೆಯಲ್ಲಿ ಮೂರನೇ ಸ್ಥಾನದಿಂದ ಐದನೇ ಸ್ಥಾನಕ್ಕೆ ಬಂದಿರುವುದು ಸಂತಸವಾಗಿದೆ. ಆದರೆ ಇನ್ನೂ 14 ದಿನ ಲಾಕ್ ಡೌನ್ ನಿಯಮ ಪಾಲಿಸಬೇಕು ಎಂದರು.



