ಡಿವಿಜಿಸುದ್ದಿ, ಬೆಂಗಳೂರು: ನಕಲಿ ಥರ್ಮೋ ಮೀಟಸ್ ಹಾಗೂ ಸ್ಯಾನಿಟೈಸರ್ ಸಂಗ್ರಹಿಸಿಟ್ಟುಕೊಂಡಿದ್ದ ಔಷಧಿ ಅಂಗಡಿ ಮೇಲೆ ಸಿಸಿಬಿ ಪೊಲೀಸರು ದಾಳಿ ನಡೆಸಿದ್ದು, 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ.
ರಾಜಾಜಿನಗರದ ಔಷಧಿ ಅಂಗಡಿಯೊಂದರಲ್ಲಿ ನಕಲಿ ಥರ್ಮೋ ಮೀಟರ್ ಹಾಗೂ ಸ್ಯಾನಿಟೈಸರ್ ಗಳನ್ನು ಸಂಗ್ರಹಿಸಿಡಲಾಗಿದ್ದ ಖಚಿತ ಮಾಹಿತಿ ಮೇರೆಗೆ ಅಧಿಕಾರಿಗಳು ದಾಳಿ ನಡೆಸಿದ್ದಾರೆ. ಪ್ರಕರಣಕ್ಕೆ ಸಂಬಂಧಿಸಿದಂತೆ ವ್ಯವಸ್ಥಾಪಕ ಶಿವಕುಮಾರ್ ಸೇರಿದಂತೆ ಇಬ್ಬರನ್ನು ವಶಕ್ಕೆ ಪಡೆದಿದ್ದಾರೆ.

ಐದು ಸಾವಿರ ಸ್ಯಾನಿಟೈಸರ್ ಮತ್ತು ಹತ್ತು ಸಾವಿರ ಥರ್ಮೋ ಮೀಟರ್ ಸೇರಿ ಒಟ್ಟು 10 ಲಕ್ಷ ರೂ. ಮೌಲ್ಯದ ವಸ್ತುಗಳನ್ನು ವಶಪಡಿಸಿಕೊಂಡಿದ್ದಾರೆ. ಆರೋಗ್ಯ ತುರ್ತು ಪರಿಸ್ಥಿತಿಯ ಸಂದರ್ಭದಲ್ಲಿ ಥರ್ಮೋ ಮೀಟರ್ ಹಾಗೂ ಸ್ಯಾನಿಟೈಸರ್ ಅವಶ್ಯವಿರುವ ಸಂದರ್ಭವನ್ನು ಬಳಸಿಕೊಂಡ ದುಷ್ಕರ್ಮಿಗಳು ನಕಲಿ ವಸ್ತುಗಳ ತಯಾರಿಕೆಗೆ ಮುಂದಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.



