ಡಿವಿಜಿಸುದ್ದಿ.ಕಾಂ, ದಾವಣಗೆರೆ: ಜಿಲ್ಲಾಧಿಕಾರಿ ಅಧ್ಯಕ್ಷತೆಯಲ್ಲಿ ಸೆ.16 ರ ಸೋಮವಾರ ಬೆಳಿಗ್ಗೆ 10 ಗಂಟೆಯಿಂದ ಜಿಲ್ಲಾಡಳಿತ ಭವನದ ಕೊಠಡಿ ಸಂಖ್ಯೆ-8 ರಲ್ಲಿ ‘ಜನಸ್ಪಂದನ ಕಾರ್ಯಕ್ರಮ’ ನಡೆಸಲಿದ್ದು ಸಾರ್ವಜನಿಕರ ಅಹವಾಲುಗಳನ್ನು ಸ್ವೀಕರಿಸುವರು.
ಸಾರ್ವಜನಿಕರು ಏನೇ ದೂರುಗಳಿದ್ದರೂ ಜಿಲ್ಲಾಧಿಕರಿಗೆ ಮನವಿ ಸಲ್ಲಿಸಿ ಪರಿಹಾರ ಕಂಡುಕೊಳ್ಳಬಹುದು. ಹೆಚ್ಚಿನ ಸಂಖ್ಯೆಯಲ್ಲಿ ಭಾಗವಹಿಸಿ ಈ ಕಾರ್ಯಕ್ರಮದ ಸದುಪಯೋಗ ಪಡೆಯಬೇಕೆಂದು ಜಿಲ್ಲಾಢಳಿತ ತಿಳಿಸಿದೆ.



