ನವದೆಹಲಿ: ಸರ್ಕಾರಿ ವೈದ್ಯೆಗೆ ಕೊರೊನಾ ವೈರಸ್ ಪಾಸಿಟಿವ್ ಬಂದ ಹಿನ್ನಲೆ ದೆಹಲಿ ಸರ್ಕಾರ ಸರ್ಕಾರಿ ಆಸ್ಪತ್ರೆಯನ್ನು ಸಂಪೂರ್ಣ ಲಾಕ್ ಮಾಡಲಾಗಿದೆ.
ವೈದ್ಯೆಯು ದೆಹಲಿ ರಾಜ್ಯ ಕ್ಯಾನ್ಸರ್ ಸಂಸ್ಥೆಯಲ್ಲಿ ಕೆಲಸ ಮಾಡುತ್ತಿದ್ದರು. ಹೀಗಾಗಿ ಮುಂಜಾಗ್ರತಾ ಕ್ರಮವಾಗಿ ಇಡೀ ಆಸ್ಪತ್ರೆಯನ್ನು ಮುಚ್ಚಲಾಗಿದೆ. ಕಟ್ಟಡದ ಒಪಿಡಿ, ಕಚೇರಿಗಳು ಮತ್ತು ಪ್ರಯೋಗಾಲಯಗಳನ್ನು ಮುಚ್ಚಲಾಗಿದ್ದು, ರಾಸಾಯನಿಕ ಬಳಸಿ ಸ್ವಚ್ಛಗೊಳಿಸಲಾಗುತ್ತಿದೆ ಎಂದು ಅಧಿಕಾರಿಗಳು ಹೇಳಿದ್ದಾರೆ. ಜೊತೆಗೆ ವೈದ್ಯರೊಂದಿಗೆ ಸಂಪರ್ಕದಲ್ಲಿ ಇದ್ದರವರನ್ನು ಹೋಂ ಕ್ವಾರಂಟೈನ್ ಮಾಡಲಾಗಿದೆ ಎಂದು ದೆಹಲಿ ಆರೋಗ್ಯ ಸಚಿವ ಸತ್ಯೇಂದರ್ ಜೈನ್ ತಿಳಿಸಿದ್ದಾರೆ.
ಯುಕೆಯಿಂದ ವಾಪಸ್ ಆಗಿದ್ದ ವೈದ್ಯರ ಸಹೋದರ ಮತ್ತು ಅತ್ತಿಗೆಯಿಂದ ಅವರಿಗೆ ಸೋಂಕು ತಗುಲಿದೆ ಎಂದು ಶಂಕಿಸಲಾಗಿದೆ. ಅವರ ಜೊತೆ ಸಂಪರ್ಕದಲ್ಲಿದ್ದ ಎಲ್ಲರನ್ನೂ ಪರೀಕ್ಷೆ ಮಾಡುವ ಕೆಲಸ ನಡೆಯುತ್ತಿದೆ ಎಂದು ತಿಳಿಸಿದ್ದಾರೆ.



