ಡಿವಿಜಿ ಸುದ್ದಿ, ಶಿವಮೊಗ್ಗ : ಕೊರೊನಾ ವೈರಸ್ ಪರಿಹಾರ ನಿಧಿಗೆ ಶಾಸಕ ಎಸ್. ರುದ್ರೇಗೌಡ ಅವರು 25 ಲಕ್ಷ ದೇಣಿಗೆ ನೀಡಿದರು.
ಶಿವಮೊಗ್ಗ ಜಿಲ್ಲಾಧಿಕಾರಿಗಳ ಮೂಲಕ ಮುಖ್ಯಮಂತ್ರಿಗಳ ಪರಿಹಾರ ನಿಧಿ ಶಾಸಕರ ಪ್ರದೇಶಾಭಿವೃದ್ದಿ ಅನುದಾನದಡಿ 25.00 ಲಕ್ಷ ರೂಗಳನ್ನು ಹಾಗೂ ವೈಯಕ್ತಿಕವಾಗಿ ಒಂದು ಲಕ್ಷ ರೂಗಳನ್ನು ಸಲ್ಲಿಸಿದರು.
ಈ ಸಂದರ್ಭದಲ್ಲಿ ಮಾತನಾಡಿದ ರುದ್ರೇಗೌಡ ಅವರು, ಕೊರೊನಾ ಸಾಂಕ್ರಾಮಿಕ ರೋಗವು ಕರ್ನಾಟಕದಲ್ಲಿ ಉಲ್ಬಣಿಸುತ್ತಿರುವ ಹಿನ್ನಲೆಯಲ್ಲಿ ಈ ಕರೋನಾ ಮಹಾಮಾರಿಯನ್ನು ಹತೋಟಿಗೆ ತರಲು ಅಗತ್ಯ ಮುಂಜಾಗ್ರತಾ ಕ್ರಮವಾಗಿ ಪ್ರಧಾನಿ ನರೇಂದ್ರ ಮೋದಿಯವರ ಮಾರ್ಗದರ್ಶನದಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ಶ್ರಮಿಸುತ್ತಿದ್ದಾರೆ. ಕರ್ನಾಟಕ ಸರ್ಕಾರವು ಯುದ್ದೋಪಾದಿಯಲ್ಲಿ ದಿಟ್ಟ ಕ್ರಮಗಳನ್ನು ಕೈಗೊಂಡಿದ್ದು, ಈ ವೈರಾಣು ಹರಡುವುದನ್ನು ನಿಯಂತ್ರಿಸಲು ಮಹತ್ವದ ನಿರ್ಧಾರಗಳನ್ನು ಕೈಗೊಂಡಿದೆ.
ಕೋವಿಡ್ -19 ನಿಯಂತ್ರಣಕ್ಕೆ ಸಮರೋಪಾದಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಜಿಲ್ಲಾಡಳಿತ, ಜಿಲ್ಲಾ ರಕ್ಷಣಾ ಇಲಾಖೆ, ವೈದ್ಯವೃಂದ ಹಾಗೂ ಶೂಶ್ರಷಕರು,ಸ್ವಚ್ಚತೆಯನ್ನು ಕಾಪಾಡುವಲ್ಲಿ ಸಹಕರಿಸುತ್ತಿರುವ ಮಹಾನಗರ ಪಾಲಿಕೆಗಳ ಎಲ್ಲಾ ಸಿಬ್ಬಮದಿವರ್ಗದವರಿಗೆ ಅಭಿನಂದನೆ ಸಲ್ಲಿಸುತ್ತಾ ಪರಮಾತ್ಮನು ಅವರಿಗೆ ಆರೋಗ್ಯವನ್ನು ಕರುಣಿಸಲೆಂದು ಹಾರೈಸುತ್ತೇನೆ ಎಂದರು.
ರಾಜ್ಯವು ಅತ್ಯಂತ ಸಂಕಷ್ಟ ಪರಿಸ್ಥಿತಿಯಲ್ಲಿರುವುದರಿಂದ ಸರ್ಕಾರದೊಂದಿಗೆ ಮತ್ತು ನೊಂದವರಿಗೆ ಮಾನವೀಯತೆಯಲ್ಲಿ ನೆರವಾಗುವುದು ಪ್ರತಿಯೊಬ್ಬರ ಜವಾಬ್ದಾರಿಯಾಗಿದೆ. ಆರ್ಥಿಕವಾಗಿ ಶಕ್ತರಾದವರು ಸಹಕರಿಸುವ ಉದಾರತೆಯನ್ನು ತೋರಬೇಕಿದೆ. ಈ ನಿಟ್ಟಿನಲ್ಲಿ ನಮ್ಮ ಜವಾಬ್ದಾರಿ ನಿರ್ವಹಿಸಬೇಕಾಗಿದೆ ಎಂದರು.



