ವಾಷಿಂಗ್ಟನ್: ಕೊರೊನಾ ವೈರಸ್ ರೋಗಿಗಳ ಚಿಕಿತ್ಸೆಗೆ ನೀಡಲಾಗುವ ಮಲೇರಿಯಾ ನಿರೋಧಕ ಔಷಧ ಹೈಡ್ರಾಕ್ಸಿಕ್ಲೋರೋಕ್ವಿನ್ ರಫ್ತುವಿನ ಮೇಲಿನ ನಿರ್ಬಂಧವನ್ನು ತೆರವುಗೊಳಿಸದೇ ಹೋದರೆ ಪ್ರತೀಕಾರ ತೀರಿಸಿಕೊಳ್ಳುವ ಎಚ್ಚರಿಕೆಯನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ನೀಡಿದ್ದಾರೆ.
I spoke to him (PM Modi), Sunday morning & I said we appreciate it that you are allowing our supply (of Hydroxychloroquine) to come out, if he doesn't allow it to come out, that would be okay, but of course, there may be retaliation, why wouldn't there be?: US Pres Donald Trump pic.twitter.com/kntAqATp4J
— ANI (@ANI) April 6, 2020
ವೈಟ್ ಹೌಸ್‌ನಲ್ಲಿ ಮಾತನಾಡಿರುವ ಅವರು, ಅಮೆರಿಕದೊಂದಿಗೆ ಭಾರತದ ಸಂಬಂಧ ಉತ್ತಮವಾಗಿದೆ. ಮಲೇರಿಯಾ ನಿರೋಧಕ ಔಷಧ ಬೇಕೆಂದು ಅಮೆರಿಕ ಕೋರಿಕೆಯ ಹೊರತಾಗಿಯೂ ಭಾರತದ ಔಷಧ ರಫ್ತು ನಿಷೇಧಿಸಿದೆ. ಭಾರತ ನಿರ್ಬಂಧವನ್ನು ತೆರವು ಮಾಡದೇ ಇರುವ ಕಾರಣ ಏನು ಅಂತಾ ನನಗೆ ತಿಳಿಯುತ್ತಿಲ್ಲ. ಭಾರತದ ನಡೆ ನನಗೆ ಆಶ್ಚರ್ಯ ತರಿಸಿದೆ. ಹಾಗೇನಾದರೂ ಭಾರತ ಮಲೇರಿಯಾ ನಿರೋಧಕ ಔಷಧ ಪೂರೈಸದೇ ಹೋದರೆ ಅದಕ್ಕೆ ಪ್ರತಿಯಾಗಿ ಪ್ರತೀಕಾರವಂತೂ ಇದ್ದೇ ಇರುತ್ತದೆ. ಅಂಥದ್ದೊಂದು ನಿರ್ಧಾರವನ್ನು ಅಮೆರಿಕ ಕೈಗೊಳ್ಳಬಾರದೇಕೆ?’ ಎಂದು ಟ್ರಂಪ್ ಪ್ರಶ್ನಿಸಿದ್ದಾರೆ.
ದೇಶದ ಕೊರೊನಾ ರೋಗಿಗಳಿಗೆ ಚಿಕಿತ್ಸೆ ನೀಡುವ ಸಲುವಾಗಿ ಈಗಾಗಲೇ ಸಲ್ಲಿಸಿರುವ ಬೇಡಿಕೆಯಂತೆ ಹೈಡ್ರಾಕ್ಸಿಕ್ಲೊರೋಕ್ವಿನ್ ಮಾತ್ರೆಗಳ ರಫ್ತಿಗೆ ಸಹಕರಿಸುವಂತೆ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು, ಪ್ರಧಾನಿ ನರೇಂದ್ರ ಮೋದಿ ಅವರಿಗೆ ಇತ್ತೀಚೆಗೆ ಮನವಿ ಮಾಡಿದ್ದರು.
ಪ್ರಧಾನಿ ಮೋದಿ ಅವರೊಂದಿಗೆ ನಾನು ಮಾತನಾಡಿ, ಮಲೇರಿಯಾ ಚಿಕಿತ್ಸೆಗಾಗಿ ಬಳಸುವ ಈ ಮಾತ್ರೆಗಳನ್ನು ಅಮೆರಿಕಕ್ಕೆಕ್ರಮ ಕೈಗೊಳ್ಳುವಂತೆ ಕೋರಿದ್ದೇನೆ. ಭಾರತ ದೊಡ್ಡ ಪ್ರಮಾಣದಲ್ಲಿ ಈ ಮಾತ್ರೆಯನ್ನು ಉತ್ಪಾದಿಸುತ್ತದೆ. ಹೀಗಾಗಿ ನನ್ನ ಮನವಿಯನ್ನು ಗಂಭೀರವಾಗಿ ತೆಗೆದುಕೊಳಹೇಳಿದೆ ಎಂದು ತಿಳಿಸಿದ್ದಾರೆ.
ಅಮೆರಿಕದಲ್ಲಿ 3 ಲಕ್ಷ ಜನರಲ್ಲಿ ಕೊರೊನಾ ಸೋಂಕು ಕಾಣಿಸಿಕೊಂಡದೆ. 8 ಸಾವಿರಕ್ಕೂ ಹೆಚ್ಚು ಜನರು ಸಾವನ್ನಪ್ಪಿದ್ದಾರೆ.



