ಡಿವಿಜಿ ಸುದ್ದಿ, ಹಾಸನ: ಲಾಕ್‍ಡೌನ್ ನಡುವೆಯೂ ಅನಧಿಕೃತವಾಗಿ ಮದ್ಯ ಮಾರಾಟ ಮಾಡುತ್ತಿದ್ದವರ ವಿರುದ್ಧ 25 ಪ್ರಕರಣ ದಾಖಲಿಸಲಾಗಿದ್ದು, ಒಟ್ಟು 12 ಲಕ್ಷ ಮೌಲ್ಯದ ಅಕ್ರಮ ಮದ್ಯ, ಕಳ್ಳಬಟ್ಟಿ ವಶಪಡಿಸಿಕೊಳ್ಳಲಾಗಿದೆ.
ಹಾಸನ ಜಿಲ್ಲೆಯ ವಿವಿಧ ಕಡೆ ನಡೆದ ದಾಳಿಯಲ್ಲಿ ಸುಮಾರು 22 ಆರೋಪಿಗಳನ್ನು ಬಂಧಿಸಲಾಗಿದೆ. ವಶಪಡಿಸಿಕೊಂಡ ವಾಹನ, ಮದ್ಯದ ಒಟ್ಟು ಮೌಲ್ಯ ಸುಮಾರು 12 ಲಕ್ಷ ರೂಪಾಯಿ ಆಗುತ್ತದೆ ಎಂದು ಅಬಕಾರಿ ಉಪ ಆಯುಕ್ತರು ಮಾಹಿತಿ ನೀಡಿದ್ದಾರೆ. ಕೊರೊನಾ ವೈರಸ್ ಎಲ್ಲೆಡೆ ವ್ಯಾಪಕವಾಗಿ ಹರಡುತ್ತಿರುವ ಹಿನ್ನೆಲೆ ಹಾಸನ ಜಿಲ್ಲೆಯಾದ್ಯಂತ ಮದ್ಯ ಮಾರಾಟ ನಿಷೇಧಿಸಲಾಗಿದೆ.
ಜಿಲ್ಲೆಯ 8 ತಾಲೂಕಿನಲ್ಲಿ ದಿನದ 24 ಗಂಟೆಯೂ ಕಾರ್ಯಾನಿರ್ವಹಿಸಲು ತಂಡಗಳನ್ನು ರಚಿಸಲಾಗಿದೆ. ಕೊರೊನಾ ವೈರಸ್ ಹರಡುತ್ತಿರುವ ಹಿನ್ನೆಲೆ ಮದ್ಯದಗಂಡಿಗಳನ್ನು ಮುಚ್ಚಿಸಿದ ದಿನದಿಂದ ಈವರೆಗೆ ಮದ್ಯದಂಗಡಿಗಳಲ್ಲಿ ಷರತ್ತು ಉಲ್ಲಂಘನೆಗಾಗಿ ಒಟ್ಟು 22 ಬಿಎಲ್‍ಸಿ ಮೊಕದ್ದಮೆಗಳನ್ನು ದಾಖಲಿಸಲಾಗಿದ್ದು, ಅಕ್ರಮ ಮದ್ಯ ಸಾಗಾಣಿಕೆ ಸಂಬಂಧ 6 ವಾಹನಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದರು.
ಸುದ್ದಿಗಾಗಿ ವಾಟ್ಸಾಪ್ : 7483892205
ಇಮೇಲ್: dvgsuddi@gmail.com