ನವದೆಹಲಿ: ಕೊರೊನಾ ವೈರಸ್ ಸೋಂಕು ಹರಡುವಿಕೆ ತಡೆಯುವ ನಿಟ್ಟಿನಲ್ಲಿ ದೇಶದಲ್ಲಿ ಲಾಕ್‌ಡೌನ್ ವಿಸ್ತರಣೆ ಮಾಡುವಂತೆ ಹೆಚ್ಚಿನ ರಾಜ್ಯಗಳ ಮುಖ್ಯಮಂತ್ರಿಗಳು ಪ್ರಧಾನಿ ನರೇಂದ್ರ ಮೋದಿ ಬಳಿ ಮನವಿ ಮಾಡಿದ್ದಾರೆ.
ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಕುರಿತು ಪ್ರಧಾನಿ ಅವರು ಎಲ್ಲ ರಾಜ್ಯಗಳ ಮುಖ್ಯಮಂತ್ರಿಗಳೊಂದಿಗೆ ವಿಡಿಯೋ ಕಾನ್ಫರೆನ್ಸ್ ಸಭೆ ವಿವಿಧ ರಾಜ್ಯದ ಮುಖ್ಯಮಂತ್ರಿಗಳು ತಮ್ಮ ಅಭಿಪ್ರಾಯ ವ್ಯಕ್ತಪಡಿಸಿದ್ದಾರೆ.

ಈ ವೇಳೆ ಮಾತನಾಡಿದ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಮತ್ತು ಮಹಾರಾಷ್ಟ್ರ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್, ಉತ್ತರ ಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಲಾಕ್‌ಡೌನ್ ವಿಸ್ತರಣೆಗೆ ಮನವಿ ಮಾಡಿದ್ದಾರೆ.
ದೇಶದಾದ್ಯಂತ ಏಪ್ರಿಲ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ಮಾಡಬೇಕು ಆಗ್ರಹಿಸಿದರು. ಈಗಾಗಲೇ ಪಂಜಾಬ್, ಒಡಿಶಾದಲ್ಲಿ ಏಪ್ರಿಲ್ 30ರ ವರೆಗೆ ಲಾಕ್‌ಡೌನ್ ವಿಸ್ತರಣೆ ಘೋಷಿಸಿವೆ.



