ಡಿವಿಜಿ ಸುದ್ದಿ, ಬೆಂಗಳೂರು: ರಾಜ್ಯದಲ್ಲಿ ಇಂದು ಹೊಸದಾಗಿ 17 ಜನರಲ್ಲಿ ಕೊರೊನಾ ಸೋಂಕು ದೃಢಪಟ್ಟಿದ್ದು, ರಾಜ್ಯದಲ್ಲಿ ಸೋಂಕಿತರ ಸಂಖ್ಯೆ 232ಕ್ಕೆ ಏರಿಕೆಯಾಗಿದೆ.
ಬೆಳಗಾವಿಯಲ್ಲಿ ಒಬ್ಬನಿಂದಲೇ ಮೂವರಿಗೆ ಕೊರೊನಾ ತಗುಲಿದ್ದು, ಜಿಲ್ಲೆಯಲ್ಲಿ ಒಟ್ಟು ನಾಲ್ಕು ಪ್ರಕರಣಗಳು ಪತ್ತೆಯಾಗಿವೆ. ಬೆಳಗಾವಿ ಜಿಲ್ಲೆಯ ರಾಯಭಾಗದ ಮೂವರಿಗೆ ಮತ್ತು ಹೀರೇಬಾಗೆವಾಡಿಯ ಒಬ್ಬರಲ್ಲಿ ಕೊರೊನಾ ಸೋಂಕು ಪತ್ತೆಯಾಗಿದೆ.
ವಿಜಯಪುರದಲ್ಲಿ ಮೊದಲ ಕೊರೊನಾ ಪ್ರಕರಣ ಪತ್ತೆಯಾಗಿದ್ದು ಮಾತ್ರವಲ್ಲದೇ 5 ಮಂದಿಗೆ ಬಂದಿದ್ದು ಜನರಲ್ಲಿ ಆತಂಕ ಮನೆ ಮಾಡಿದೆ. ಕಲಬುರಗಿಯ ವೃದ್ಧನಿಂದ ಇಬ್ಬರಿಗೆ, ಮೈಸೂರಿನಲ್ಲಿ ಒಬ್ಬರಿಗೆ ಸೋಂಕು ಕಾಣಿಸಿಕೊಂಡಿದೆ.ಕರ್ನಾಟಕದಲ್ಲಿ ಒಟ್ಟು 6 ಮಂದಿ ಮೃತಪಟ್ಟಿದ್ದು, 54 ಮಂದಿ ಬಿಡುಗಡೆಯಾಗಿದ್ದಾರೆ.