ಡಿವಿಜಿ ಸುದ್ದಿ, ದಾವಣಗೆರೆ: ಜಿಲ್ಲಾ ಕಾಂಗ್ರೆಸ್ ವತಿಯಿಂದ ದಾವಣಗೆರೆ ಮಹಾನಗರ ಪಾಲಿಕೆಯ ಡಾ.ಬಿ.ಅರ್. ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡುವ ಮೂಲಕ ಜನ್ಮದಿನಾಚರಣೆ ಆಚರಿಸಲಾಯಿತು. ಈ ವೇಳೆ ಕೆಪಿಸಿಸಿ ಮಾಧ್ಯಮ ವಿಶ್ಲೇಷಕ ಡಿ. ಬಸವರಾಜ್ ಅವರು ಸಂವಿಧಾನದ ಪೀಠಿಕೆ ಪ್ರತಿಜ್ಞಾ ವಿಧಿ ಬೋಧಿಸಿದರು.
ಈ ಸಂದರ್ಭದಲ್ಲಿ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ದಿನೇಶ್.ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ಎ. ನಾಗರಾಜ್, ಪಾಲಿಕೆ ಸದಸ್ಯರಾದ ಜಿ.ಡಿ ಪ್ರಕಾಶ್, ಸುಧಾ ಇಟ್ಟಿಗುಡಿ ಮಂಜುನಾಥ್, ಜಾಕಿರ್ ಅಲಿ, ವಿನಾಯಕ ಪೈಲ್ವಾನ್, ಜಿಲ್ಲಾ ಯುವ ಕಾಂಗ್ರೆಸ್ ಉಪಾಧ್ಯಕ್ಷ ಎಲ್.ಎಂ.ಎಚ್ ಸಾಗರ್, ಪಕ್ಷದ ಮುಖಂಡರಾದ ಕೆ.ಜಿ ಶಿವಕುಮಾರ್, ಪಂಡಿತ್, ಜಯಪ್ರಕಾಶ್, ಚಂದ್ರಪ್ಪ, ಮುಜಾಹಿದ್, ಕೊಟ್ರಯ್ಯ, ವಿನಯ್, ಡಿ ಶಿವಕುಮಾರ್, ಮನು ದುಗ್ಗಪ್ಪ, ಕೊಂಡಜ್ಜಿ ಮಲ್ಲಿಕಾರ್ಜುನ್, ಕೆ.ಎಂ. ಮಂಜುನಾಥ್, ಕೆಪಿಸಿಸಿ ಸಾಮಾಜಿಕ ಜಾಲತಾಣದ ರಾಜ್ಯ ಕಾರ್ಯದರ್ಶಿ ಕೆ.ಎಲ್. ಹರೀಶ್ ಉಪಸ್ಥಿತರಿದ್ದರು.