ಡಿವಿಜಿ ಸುದ್ದಿ, ದಾವಣಗೆರೆ: ಲಾಕ್ ಡೌನ್ ಹಿನ್ನೆಲೆ ಬಡವರಿಗೆ, ಕೂಲಿ ಕಾರ್ಮಿಕರಿಗೆ ದಾವಣಗೆರೆ ಮಹಾನಗರ ಪಾಲಿಕೆಯ 7ನೇ ವಾರ್ಡ್ ಸದಸ್ಯ ವಿನಾಯಕ ಪೈಲ್ವಾನ್ 2 ಸಾವಿರ ಆಹಾರ ಕಿಟ್ ವಿತರಿಸಿದರು.
ಈ ಕಾರ್ಯಕ್ರಮಕ್ಕೆ ಕಾಂಗ್ರೆಸ್ ಹಿರಿಯ ಮುಖಂಡ, ಶಾಸಕ ಶಾಮನೂರು ಶಿವಶಂಕರಪ್ಪ ಚಾಲನೆ ನೀಡಿದರು. ಅಗತ್ಯ ವಸ್ತುಗಳಾದ ಜೋಳ, ಸಕ್ಕರೆ, ರವೆ, ಬೇಳೆ, ಅಡುಗೆ ಎಣ್ಣೆ ಸೇರಿದಂತೆ ಇತರೆ ಸಾಮಾಗ್ರಿ ಒಳಗೊಂಡ ಕಿಟ್ ವಿತರಿಸಲಾಯಿತು.
ನಂತರ ಮಾತನಾಡಿದ ಶಾಮನೂರು ಶಿವಶಂಕರಪ್ಪ, ಲಾಕ್ಡೌನ್ ಹಿನ್ನೆಲೆಯಲ್ಲಿ ಜನರು ಸಂಕಷ್ಟದಲಿದ್ದಾರೆ. ಇಂತಹ ಸಂದರ್ಭದಲ್ಲಿ ಸ್ಥಿತಿವಂತರು ಸಹಾಯ ಮಾಡಲು ಮುಂದೆ ಬರಬೇಕು ಎಂದು ಕರೆ ನೀಡಿದರು.
ಈ ಸಂದರ್ಭದಲ್ಲಿ ಕೆ.ಪಿ.ಸಿ.ಸಿ.ಮಾಧ್ಯಮ ವಿಶ್ಲೇಷಕ ಡಿ.ಬಸವರಾಜ್, ಎಪಿಎಂಸಿ ಮಾಜಿ ಅಧ್ಯಕ್ಷ ಮುದೇಗೌಡ್ರು ಗಿರೀಶ್, ಪಾಲಿಕೆ ಸದಸ್ಯ ವಿನಾಯಕ ಪೈಲ್ವಾನ್, ಮುಖಂಡಎಆ ಸತೀಶ್, ಕುಮಾರ್, ಸಮೀವುಲ್ಲಾ ಮತ್ತಿತರರಿದ್ದರು.



