ಡಿವಿಜಿ ಸುದ್ದಿ, ಹಾವೇರಿ: ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ರಾಣೇಬೆನ್ನೂರು ಶಾಸಕ ಅರುಣ್ಕುಮಾರ ಪೂಜಾರ್ ಅವರು 16 ಲಕ್ಷ ರೂಪಾಯಿ ದೇಣಿಗೆ ನೀಡಿದ್ದಾರೆ.
ಶಾಸಕ ಅರುಣ್ಕುಮಾರ್ ಅವರು ಮುಖ್ಯಮಂತ್ರಿ ವಿಪತ್ತು ಪರಿಹಾರ ನಿಧಿಗೆ 16.47 ಲಕ್ಷ ರೂ. ಚೆಕ್ ನೀಡಿದ್ದಾರೆ. ಬೆಂಗಳೂರಿನಲ್ಲಿ ಗೃಹ ಕಚೇರಿಯಲ್ಲಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರನ್ನು ಭೇಟಿ ಮಾಡಿ, ಪರಿಹಾರ ನಿಧಿಗೆ ಚೆಕ್ ನೀಡಿದರು.
ಈ ಸಂದರ್ಭದಲ್ಲಿ ಗೃಹ ಸಚಿವ, ಹಾವೇರಿ ಜಿಲ್ಲಾ ಉಸ್ತುವಾರಿ ಸಚಿವ ಬಸವರಾಜ್ ಬೊಮ್ಮಾಯಿ ಉಪಸ್ಥಿತರಿದ್ದರು. ಕೊರೊನಾ ವೈರಸ್ ವಿರುದ್ಧದ ಹೋರಾಟಕ್ಕೆ ಅನೇಕರು ಕೇಂದ್ರ ಹಾಗೂ ರಾಜ್ಯ ಸರ್ಕಾರಕ್ಕೆ ಅನೇಕರು ದೇಣಿಗೆ ನೀಡಿ ಬೆಂಬಲ ಸೂಚಿಸಿದ್ದಾರೆ.



