ಡಿವಿಜಿ ಸುದ್ದಿ, ದಾವಣಗೆರೆ : ಕೊರೊನಾ ವಿರುದ್ಧದ ಹೋರಾಟಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದಾವಣಗೆರೆ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್ ವತಿಯಿಂದ 10 ಲಕ್ಷ ರೂಪಾಯಿ ದೇಣಿಗೆಯನ್ನು ಸಹಕಾರ ಸಚಿವ ಎಸ್.ಟಿ. ಸೋಮಶೇಖರ್ ಅವರಿಗೆ ಚಕ್ ಮೂಲಕ ಹಸ್ತಾಂತರಿಸಲಾಯಿತು.
ಸಂಸದ ಜಿ.ಎಂ.ಸಿದ್ದೇಶ್ವರ್, ಶಾಸಕರಾದ ಎಸ್.ಎ.ರವಿಂದ್ರನಾಥ್, ಎಸ್.ವಿ.ರಾಮಚಂದ್ರಪ್ಪ, ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಸಹಕಾರ ಬ್ಯಾಂಕ್‍ನ ಅಧ್ಯಕ್ಷ ಡಾ.ಜೆ.ಆರ್.ಷಣ್ಮುಖಪ್ಪ, ಸಹಕಾರ ಸಂಘದ ಉಪ ನಿಬಂಧಕ ಬಿ.ಜಯಪ್ರಕಾಶ್, ಬ್ಯಾಂಕಿನ ಪ್ರಧಾನ ವ್ಯವಸ್ಥಾಪಕ ಆರ್.ಜಿ.ತ್ಯಾವರನಾಯ್ಕ ಹಾಗೂ ಬ್ಯಾಂಕಿನ ಹಿರಿಯ ಅಧಿಕಾರಿಗಳು ಇದ್ದರು.
ಶನಿವಾರ ನಗರದ ಜಿಲ್ಲಾ ಕೇಂದ್ರ ಸಹಕಾರ ಬ್ಯಾಂಕ್‍ಗೆ ಸಹಕಾರ ಸಚಿವರಾದ ಎಸ್.ಟಿ.ಸೋಮಶೇಖರ್ ಭೇಟಿ ನೀಡಿ ಬ್ಯಾಂಕ್ ಅಧಿಕಾರಿಗಳ ಜೊತೆ ಸಭೆ ನಡೆಸಿದರು.ಎಷ್ಟು ರೈತರಿಗೆ ಸಾಲ ನೀಡಿದ್ದೀರಿ ಎಂದು ಅಧಿಕಾರಿಗಳನ್ನು ಕೇಳಿದಾಗ, ಕಳೆದ ಸಾಲಿನಲ್ಲಿ 18 ಸಾವಿರ ರೈತರಿಗೆ ರೂ.86 ಕೋಟಿ ಸಾಲ ನೀಡಲಾಗಿದೆ. ಈ ಬಾರಿಯೂ ಅಷ್ಟೇ ಸಾಲ ನೀಡಲಾಗುವುದು ಎಂದು ತಿಳಿಸಿದರು.
ಬ್ಯಾಂಕಿನ ನಿರ್ದೇಶಕ ಆರ್.ಜಿ.ಶ್ರೀನಿವಾಸಮೂರ್ತಿ ಸ್ವಾಗತಿಸಿದರು. ಬ್ಯಾಂಕಿನ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಂ.ಹೆಚ್.ಲಕ್ಷ್ಮಣ್ ಪ್ರಗತಿ ಬಗ್ಗೆ ವಿವರಿಸಿ, ಸಾಲ ಮನ್ನಾ ಯೋಜನೆಯಡಿ ಡಿಸಿಸಿ ಬ್ಯಾಂಕಿಗೆ ರೂ.216 ಕೋಟಿ ಬಿಡುಗಡೆಯಾಗಬೇಕಿದ್ದು, ಇದರಲ್ಲಿ 182 ಕೋಟಿ ಬಿಡುಗಡೆಯಾಗಿದೆ. ರೂ.34 ಕೋಟಿ ಬಾಕಿ ಇದೆ. ಈ ಬಾಕಿ ಹಣ ಬಂದರೆ ಜಿಲ್ಲೆ ಹಸಿರು ಪಟ್ಟಿಗೆ ಸೇರ್ಪಡೆಗೊಳ್ಳಲಿದೆ ಎಂದರು.



