ಡಿವಿಜಿ ಸುದ್ದಿ, ದಾವಣಗೆರೆ: ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಕರೆಯ ಹಿನ್ನೆಲೆಯಲ್ಲಿ ದಾವಣಗೆರೆ ಕಾಂಗ್ರೆಸ್ ಯುವ ಘಟಕದಿಂದ ರಕ್ತ ದಾನ ಶಿಬಿರ ಆಯೋಜಿಸಲಾಗಿತ್ತು.
ಕೊರೊನಾ ಮಹಾಮಾರಿಯಿಂದ ಇಡೀ ಜಗತ್ತೇ ತತ್ತರಿಸಿ ಹೋಗಿದೆ. ವೈರಸ್ ನಿಯಂತ್ರಣಕ್ಕೆ ಕೇಂದ್ರ ಸರ್ಕಾರ ದೇಶದ್ಯಂತ ಲಾಕ್ ಡೌನ್ ಘೋಷಣೆ ಮಾಡಿದೆ. ಇಂತಹ ಸಂದರ್ಭದಲ್ಲಿ ದೇಶದಲ್ಲಿ ಅನೇಕ ಸಂಕಷ್ಟಗಳು ಎದುರಾಗಿದ್ದು, ಅದರಲ್ಲಿ ಮುಖ್ಯವಾಗಿ ರಕ್ತ ನಿಧಿ ಬ್ಯಾಂಕ್ ಗಳಲ್ಲಿ ರಕ್ತ ಸಂಗ್ರಹಣೆ ಕಡಿಮೆಯಾಗಿದೆ. ಹೀಗಾಗಿ ರಕ್ತ ದಾನ ಶಿಬಿರ ಆಯೋಜಿಸಿ ಎಂದು ಎಂದು ಕಾಂಗ್ರೆಸ್ ಕಾರ್ಯ ಕರ್ತರಿಗೆ ಡಿ.ಕೆ. ಶಿವಕುಮಾರ್ ಕರೆ ನೀಡಿದ್ದರು.

ಈ ಹಿನ್ನೆಲೆಯಲ್ಲಿ ದಾವಣಗೆರೆ ಜಿಲ್ಲಾ ಯುವ ಕಾಂಗ್ರೆಸ್ ಮತ್ತು ಎನ್ ಎಸ್ ಯು ಐ ಘಟಕದಿಂದ ಚಿಗಟೇರಿ ಜಿಲ್ಲಾ ಆಸ್ಪತ್ರೆಯ ರಕ್ತನಿಧಿ ಬ್ಯಾಂಕ್ ಸಹಯೋಗದೊಂದಿಗೆ ರಕ್ತದಾನ ಏರ್ಪಡಿಸಲಾಗಿತ್ತು. ಯುವಕರು ಸ್ವಯಂ ಪ್ರೇರಿತವಾಗಿ ರಕ್ತದಾನ ಮಾಡಿದರು.

ಈ ಸಂದರ್ಭದಲ್ಲಿ ಕೆಪಿಸಿಸಿ ಮಾಧ್ಯಮ ವಿಶ್ಲೇಷಕರ ಡಿ. ಬಸವರಾಜ್, ಜಿಲ್ಲಾ ಪ್ರಧಾನ ಕಾರ್ಯದರ್ಶಿ ದಿನೇಶ್. ಕೆ. ಶೆಟ್ಟಿ, ಪಾಲಿಕೆ ವಿರೋಧ ಪಕ್ಷದ ನಾಯಕ ನಾಗರಾಜ್ ಜಿಲ್ಲಾ ಯುವ ಕಾಂಗ್ರೆಸ್ ಅಧ್ಯಕ್ಷ ಕೆ.ಎಸ್. ಹರೀಶ್, ಉಪಾಧ್ಯಕ್ಷ ಸಾಗರ್ ಎಲ್.ಎಂ. ಎಚ್ ಇಬ್ರಾಹಿಂ ಖಲೀಲ್, ಎನ್ ಎಸ್ ಯು ಐ ಜಿಲ್ಲಾಧ್ಯಕ್ಷ ಅಲಿ ರಹಮತ್ ಪೈಲ್ವಾನ್, ಯುವ ಕಾಂಗ್ರೆಸ್ ಅಧ್ಯಕ್ಷ ಚಂದ್ರು ಉತ್ತರ. ಸದ್ದಾಮ್ ಖಾನ್ ದಕ್ಷಿಣ, ಆರ್ ಜಿ ಪಿ ಆರ್ ಎಸ್ ಜಿಲ್ಲಾಧ್ಯಕ್ಷ ರಾಘವೇಂದ್ರ ಗೌಡ. ಸಾಮಾಜಿಕ ಜಾಲತಾಣ ಜಿಲ್ಲಾಧ್ಯಕ್ಷ ಪ್ರಸನ್ನ ಬೆಳಕೆರೆ, ಶ್ರೀಕಾಂತ್ ಬಾಗೆರ, ಜಯಪ್ರಕಾಶ್, ವಿನಯ್, ದರ್ಶನ್, ಗಿರಿಧರ್ , ಮಲ್ಲಿಕಾರ್ಜುನ್ ಇಂಗಳೇಶ್ವರ್, ಮುಜಾಹಿದ್, ಶಿವಕುಮಾರ್ ಬಾತಿ, ಇರ್ಫಾನ್, ಕಮರ ಅಲಿ, ಕೆಪಿಸಿಸಿ ಸಾಮಾಜಿಕ ಜಾಲತಾಣ ರಾಜ್ಯ ಕಾರ್ಯದರ್ಶಿ ಕೆ. ಎಲ್. ಹರೀಶ್ ಉಪಸ್ಥಿತರಿದ್ದರು.



