ಡಿವಿಜಿ ಸುದ್ದಿ, ದಾವಣಗೆರೆ: ಕೊರೊನಾ ವೈರಸ್ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾ ಆಸ್ಪತ್ರೆಯಲ್ಲಿ ಅಗತ್ಯವಿರುವ ಸಿಬ್ಬಂದಿಗಳನ್ನು ತಾತ್ಕಾಲಿಕವಾಗಿ 6 ತಿಂಗಳ ಮಟ್ಟಿಗೆ ಗುತ್ತಿಗೆ, ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳಲು ನೇರ ಸಂದರ್ಶನ (walk in Interview) ನಡೆಸಲಾಗುವುದು. ಆಸಕ್ತರು ಏ. 22 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾದ ನೇರ ಸಂದರ್ಶನದಲ್ಲಿ ಪಾಲ್ಗೊಳ್ಳಬಹುದಾಗಿದೆ.
ವೈದ್ಯರು, ತಜ್ಞವೈದ್ಯರು 10 ಹುದ್ದೆ, ಶುಶ್ರೂಷಕರು 20 ಹುದ್ದೆ, ಪ್ರಯೋಗ ಶಾಲಾ ತಂತ್ರಜ್ಞರು 5 ಹುದ್ದೆ, ಗ್ರೂಪ್ –ಡಿ 10 ಹುದ್ದೆಗಳನ್ನು ಗುತ್ತಿಗೆ ಆಧಾರದ ಮೇಲೆ ನೇಮಕಾತಿ ಮಾಡಲು ನೇರ ಸಂದರ್ಶನ ನಡೆಯಲಿದೆ. ಅಭ್ಯರ್ಥಿಗಳು ಏ.21 ರಂದು ಬೆಳಿಗ್ಗೆ 10.30 ರಿಂದ ಮಧ್ಯಾಹ್ನ 01.30 ಗಂಟೆಯೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿಗೆ ಹಾಜರಾಗಿ ಸಂಬಂಧಪಟ್ಟ ವಿಭಾಗದಲ್ಲಿ ವಿದ್ಯಾರ್ಹತೆಯ ಅರ್ಹತೆಯ ಮೂಲ ದಾಖಲೆಗಳ ಪರಿಶೀಲಿಸಿ, ಅರ್ಹತಾ ದಾಖಲೆಗಳ ಒಂದು ಸೆಟ್ ದೃಢೀಕೃತ ಜೆರಾಕ್ಸ್ ಪ್ರತಿಗಳನ್ನು ಸಲ್ಲಿಸಬೇಕು.
ಏ.22 ರಂದು ಬೆಳಿಗ್ಗೆ 11 ಗಂಟೆಗೆ ಜಿಲ್ಲಾಧಿಕಾರಿಗಳ ಅಧ್ಯಕ್ಷತೆಯಲ್ಲಿ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಏರ್ಪಡಿಸಲಾದ ನೇರ ಸಂದರ್ಶನದಲ್ಲಿ ಭಾಗವಹಿಸಬೇಕು ಎಂದು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಡಾ. ಹೆಚ್.ಎಸ್.ರಾಘವೇಂದ್ರಸ್ವಾಮಿ ಅವರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.



