ಡಿವಿಜಿ ಸುದ್ದಿ.ಕಾಂ, ನ್ಯಾಮತಿ: ಬರ ಪರಿಹಾರ ನಿರ್ವಹಣೆಯಲ್ಲಿ ರಾಜ್ಯಕ್ಕೆ ಕೇಂದ್ರ ಸರ್ಕಾರ ಎಲ್ಲಾ ರೀತಿಯ ನೆರವು ನೀಡಿದೆ. ಈ ವಿಚಾರದಲ್ಲಿ ಕಾಂಗ್ರೆಸ್ ಪಕ್ಷ ಮೊಸರಿನಲ್ಲಿ ಕಲ್ಲು ಹುಡುಕುವುದನ್ನು ಬಿಡಬೇಕು ಎಂದು ಮುಖ್ಯಮಂತ್ರಿ ರಾಜಕೀಯ ಕಾರ್ಯದರ್ಶಿ ಎಂ.ಪಿ. ರೇಣುಕಾಚಾರ್ಯ ಹೇಳಿದ್ದಾರೆ.
ದಾವಣಗೆರೆ ಜಿಲ್ಲೆಯ ನ್ಯಾಮತಿ ತಾಲ್ಲೂಕಿನ ಸವಳಂಗ ಗ್ರಾಮದಲ್ಲಿ ನಡೆದ ಶಾಲಾ ಕಾರ್ಯಕ್ರಮದಲ್ಲಿ ಮಾತನಾಡಿದ ವರು, ಮಾಜಿ ಸಿಎಂ ಸಿದ್ದರಾಮಯ್ಯನವರು ಯಡಿಯೂರಪ್ಪ ಹಾಗೂ ಅಮಿತ್ ಶಾ ಬಗ್ಗೆ ಹಗುರವಾಗಿ ಮಾತನಾಡಿದ್ದು ಸರಿಯಲ್ಲ. ಕೇಂದ್ರ ಸರ್ಕಾರ ರಾಜ್ಯಕ್ಕೆ ಎಲ್ಲಾ ನೆರವು ನೀಡುತ್ತದೆ. ಕಾಂಗ್ರೆಸ್ ಪಕ್ಷದ ಕೇಂದ್ರ ಹಾಗೂ ರಾಜ್ಯದ ನಾಯಕರು ನಿರ್ಜೀವವಾಗಿದ್ದಾರೆ. ಇದಲ್ಲದೆ ಕಾಂಗ್ರೆಸ್ ಪಕ್ಷ ಮುಳುಗುತ್ತಿರುವ ಹಡಗು. ಇಂತಹ ಸಂದರ್ಭದಲ್ಲಿ ನೀವು ಮೊಸರಿನಲ್ಲಿ ಕಲ್ಲು ಹುಡುಕುತ್ತಿರಲ್ಲ..? ಎಂದು ನಿನ್ನೆ ಸರಣಿ ಟ್ವಿಟ್ ಮೂಲಕ ರಾಜ್ಯ ಬಿಜೆಪಿ ನಾಯಕರನ್ನು ಕುಟುಕಿದ್ದ ಮಾಜಿ ಸಿದ್ದರಾಮಯ್ಯ ಅವರಿಗೆ ತಿರುಗೇಟು ನೀಡಿದ್ದರು.
ಎಲ್ಲಾ ಶಾಸಕರು, ಸಚಿವರು ಸಂಘಟನೆ ಮಾಡಿ ಯಡಿಯೂರಪ್ಪನವರ ಕೈ ಬಲಗೊಳಿಸುತ್ತಿದ್ದಾರೆ. ರಾಜ್ಯಾಧ್ಯಕ್ಷರು ಕೂಡ ಸಂಘಟನೆ ಮಾಡಲು ಕರೆ ಕೊಟ್ಟಿದ್ದಾರೆ. ರಾಜ್ಯಾಧ್ಯಕ್ಷರ ಹಾಗೂ ಮುಖ್ಯಮಂತ್ರಿಗಳ ನೇತೃತ್ವದಲ್ಲಿ ಸರ್ಕಾರ ಸುಭದ್ರವಾಗಿ ನಡೆಯಲಿದೆ. ಪಕ್ಷದಲ್ಲಿ ಸಂಘಟನೆ ಇದೆ, ಯಾರಿಗೂ ಅಸಮಾಧಾನವಾಗಿಲ್ಲ ಎಂದರು.



