ಡಿವಿಜಿ ಸುದ್ದಿ, ದಾವಣಗೆರೆ: ಕೋವಿಡ್-19 ನಿಯಂತ್ರಣಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಗೆ ದೂಡಾ ವತಿಯಿಂದ 25 ಲಕ್ಷ ರೂಪಾಯಿ ಚೆಕ್ ಅನ್ನು ಜಿಲ್ಲಾಡಳಿತ ಕಚೇರಿ ಸಭಾಂಗಣದಲ್ಲಿ ನಗರಾಭಿವೃದ್ದಿ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಭೈರತಿ ಬಸವರಾಜ್ ಅವರಿಗೆ ಹಸ್ತಾಂತರಿಸಲಾಯಿತು.
ದೂಡಾ ಅಧ್ಯಕ್ಷ ರಾಜನಹಳ್ಳಿ ಶಿವಕುಮಾರ್, ಆಯುಕ್ತ ಬಿ.ಟಿ.ಕುಮಾರಸ್ವಾಮಿ, ಸಂಸದ ಜಿ.ಎಂ.ಸಿದ್ದೇಶ್ವರ, ಶಾಸಕರಾದ ಎಸ್.ಎ.ರವೀಂದ್ರನಾಥ್, ಎಸ್.ವಿ.ರಾಮಚಂದ್ರ, ಎಂಎಲ್‍ಸಿಗಳಾದ ಅಬ್ದುಲ್ ಜಬ್ಬಾರ್, ನಾರಾಯಣಸ್ವಾಮಿ, ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿ ಎಸ್.ಆರ್.ಉಮಾಶಂಕರ್ ಜಿಲ್ಲಾಧಿಕಾರಿ ಮಹಾಂತೇಶ ಬೀಳಗಿ, ಎಸ್‍ಪಿ ಹನುಮಂತರಾಯ, ಸಿಇಓ ಪದ್ಮಾ ಬಸವಂತಪ್ಪ ಸೇರಿದಂತೆ ಮತ್ತಿತರ ಅಧಿಕಾರಿಗಳು ಉಪಸ್ಥಿತರಿದ್ದರು.



